ಬೆಂಗಳೂರು:ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಮುಂಜಾನೆ ವೇಳೆ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನೊಬ್ಬನನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕೆ.ಆರ್.ಪುರದ ದೇವಸಂದ್ರ ನಿವಾಸಿ ರಫೀಕ್ ಅಲಿಯಾಸ್ ಸೇಟಿ(೨೯) ಬಂಧಿತ. ಆರೋಪಿ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ೨೨.೦೮ ಲಕ್ಷ ರೂ. ಮೌಲ್ಯದ ೪೦೯ ಗ್ರಾಂ ತೂಕದ ಚಿನ್ನಾಭರಣ, ೪೨೫ ಗ್ರಾಂ ತೂಕದ ಬೆಳ್ಳಿ ಆಭರಣ, ೧೮೯ ಗ್ರಾಂ ತೂಕದ ನಕಲಿ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ದುಷ್ಕರ್ಮಿಗಳು ಪ್ರಕಾಶನಗರದ ದಿನಸಿ ಅಂಗಡಿಯ ರೋಲಿಂಗ್ ಶೆಟರ್ ಬೀಗ ಮುರಿದು ೫೦ ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆರೋಪಿಯು ವೃತ್ತಿಪರ ಕಳ್ಳನಾಗಿದ್ದು, ಈ ಹಿಂದೆ ಬೆಂಗಳೂರು ನಗರದ ಪೀಣ್ಯ, ಗಿರಿನಗರ, ಕಬ್ಬನ್ ಪಾರ್ಕ್, ಕೆ.ಆರ್.ಪುರಂ, ಬನಶಂಕರಿ, ಕೆ.ಜಿ.ಹಳ್ಳಿ, ಚಂದ್ರಾಲೇಔಟ್ ಹಾಗೂ ಚಿಕ್ಕಮಗಳೂರು ನಗರ, ಚಿತ್ರದುರ್ಗ, ಮಂಡ್ಯ, ನೆಲಮಂಗಲ, ತಿಪಟೂರು ಪೊಲೀಸ್ ಠಾಣೆ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ೨೦ ಮನೆಗಳವು ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ. ಜಾಮೀನು ಪಡೆದು ಹೊರಗೆ ಬಂದ ನಂತರ ಮತ್ತೆ ಮನೆಗಳವು ಕೃತ್ಯಗಳಲ್ಲಿ ತೊಡಗುತ್ತಿದ್ದ. ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ. ಪ್ರಕರಣವೊಂದರಲ್ಲಿ ಕಳೆದ ತಿಂಗಳಷ್ಟೇ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ ಆರೋಪಿ ರಫೀಕ್, ರಾಜಾಜಿನಗರ ಮತ್ತು ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಗಳವು ಮಾಡಿದ್ದ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಮೋಜಿನ ಜೀವನ ನಡೆಸುತ್ತಿದ್ದ:ಆರೋಪಿಯು ೧೦ನೇ ವಯಸ್ಸಿನಿಂದಲೇ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಕಾಲಕ್ರಮೇಣ ದುಶ್ಚಟಗಳ ದಾಸನಾದ ಈತ ಮೋಜಿನ ಜೀವನಕ್ಕಾಗಿ ಸುಲಭವಾಗಿ ಹಣ ಗಳಿಸಲು ಮನೆ ಕಳವು ಮಾಡುತ್ತಿದ್ದ. ಸಂಜೆ ಹೊತ್ತು ನಗರದ ವಿವಿಧೆಡೆ ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ಮುಂಜಾನೆ ಆ ಮನೆಗಳ ಬೀಗ ಮುರಿದು ನಗದು, ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ. ಕದ್ದ ವಸ್ತುಗಳನ್ನು ಪರಿಚಿತರ ಮೂಲಕ ವಿಲೇವಾರಿ ಪಡೆದ ಹಣವನ್ನು ಮೋಜು ಮಾಡಿ ವ್ಯಯಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.ಹುಡಿಗಿಯರ ಶೋಕಿ!ಆರೋಪಿಗೆ ಹುಡುಗಿಯರ ಚಟವಿದ್ದು, ರಾಜ್ಯ ಹಾಗೂ ಹೊರರಾಜ್ಯಗಳಿಗೆ ತೆರಳಿ ವೇಶ್ಯೆ ವೃತ್ತಿ ಮಾಡುವ ಹುಡುಗಿಯರ ಸಂಪರ್ಕ ಮಾಡಿ ಎಂಜಾಯ್ ಮಾಡುತ್ತಿದ್ದ. ಆರೋಪಿ ಇತ್ತೀಚೆಗೆ ರಾಜಾನಗರ ಹಾಗೂ ನೆಲಮಂಗಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತ ಮಾಡಿ ಮಧ್ಯಪ್ರದೇಶ ಹಾಗೂ ರಾಜಸ್ಥಾನಕ್ಕೆ ತೆರಳಿ ಶೋಕಿ ಮಾಡಿದ್ದ. ಆರೋಪಿಯು ಹಣ ಖಾಲಿಯಾಗುವವರೆಗೆ ಎಂಜಾಯ್ ಮಾಡಿ ಬಳಿಕ ಮತ್ತೆ ಸಂಚು ರೂಪಿಸಿ ಮನೆಗಳವು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
