ಬೆಂಗಳೂರು:ಚುನಾವಣೆ ಮುನ್ನ ಮತದಾರರಿಗೆ ಕೊಟ್ಟ ಭರವಸೆಯಂತೆ ಅನ್ನಬಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ಸರ್ಕಾರವನ್ನು ಆಗ್ರಹಿಸಿದೆ.
2013ರ ಜುಲೈನಲ್ಲಿ ಮೊದಲ ಬಾರಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಜಾರಿಗೆ ತಂದರು. ಯೋಜನೆಯಡಿ ಬಿಪಿಎಲ್​ ಕುಟುಂಬಗಳಿಗೆ 30 ಕೆಜಿ ಅಕ್ಕಿಯನ್ನು ಕೆಜಿಗೆ 1 ರೂ. ದರದಲ್ಲಿ ನೀಡಲಾಗುತ್ತಿತ್ತು. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಪ್ರಾರಂಭದಲ್ಲಿ ಅಕ್ಕಿ ಸಿಗದ ಪರಿಣಾಮ ನಗದು ವರ್ಗಾವಣೆ ವ್ಯವಸ್ಥೆ ಜಾರಿಗೆ ತಂದಿದ್ದೀರಿ. ಪ್ರತಿ ತಿಂಗಳು ಕೆಜಿಗೆ 28 ರೂ.ನಂತೆ 2.36 ಲಕ್ಷ ಮೆಟ್ರಿಕ್​ ಟನ್​ ಅಕ್ಕಿಯನ್ನು 2025ರ ಮಾರ್ಚ್​ವರೆಗೆ ವಿತರಿಸಲು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ.ಆದರೂ, ಅನ್ನರಾಮಯ್ಯವೆಂದು ಕರೆಸಿಕೊಂಡಿರುವ ನೀವು ಅಕ್ಕಿ ಖರೀದಿಸಲು ವಿಳಂಬ ಮಾಡುತ್ತಿರುವುದೇಕೆ? ಎಂದು ಸಂಘದ ಅಧ್ಯಕ್ಷ ಕೃಷ್ಣಪ್ಪ ಪ್ರಶ್ನಿಸಿದ್ದಾರೆ.
ಹೋಟೆಲ್ ಮಯೂರ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷಕಡಿಮೆ ದರದಲ್ಲಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ(ಎಫ್​​​​​ಸಿಐ) ಒಪ್ಪಿದ್ದರೂ ಸಚಿವ ಸಂಪುಟದಲ್ಲಿ ಅಕ್ಕಿ ಖರೀದಿಸುವ ರ್ನಿಣಯ ಕೈಬಿಟ್ಟಿರುವುದೇಕೆ?. ಇದರಿಂದಾಗಿ ಕಾರ್ಡ್​ದಾರರ ಹೊಟ್ಟೆ ಮೇಲೆ ಬರೆ ಎಳೆದಂತಾಗಲಿದೆ. ಹಾಗಾಗಿ, ಯಾವುದೇ ಕಾರಣಕ್ಕೂ ಅಕ್ಕಿ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯಬಾರದು ಎಂದು ಸಲಹೆ ನೀಡಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:11 + 19 =
Remember me
