ಬೆಂಗಳೂರು:ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮನಾಗಿರುವ ಬಿಜೆಪಿ ಸರ್ಕಾರ ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ ಸರ್ಕಾರಿ ಉದ್ಯೋಗ ಕೊಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರ ಜಲಕ್ರಾಂತಿಯನ್ನು ಪ್ರಸ್ತಾಪಿಸಿದ್ದರು. ಬಳಿಕ 2020ರ ಜುಲೈ 2 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ನೌಕರಿ ನೀಡಲು ಸೂಚಿಸಿದ್ದರು. ಇದಾಗಿ ಎರಡು ವರ್ಷ ಕಳೆದು ಕಾಮೇಗೌಡರು ನಿಧನರಾದರೂ ಇವರ ಪುತ್ರನಿಗೆ ಸರ್ಕಾರಿ ನೌಕರಿ ನೀಡಿಲ್ಲ.
ಕಾಮೇಗೌಡ ಅವರು ತಮ್ಮ ಜಮೀನು ಮತ್ತು ಸುತ್ತ ಮುತ್ತಲ ಸ್ಥಳಗಳಲ್ಲಿ 16 ಸಣ್ಣ ಕೆರೆ ಕಟ್ಟೆಗಳನ್ನು ನಿರ್ಮಿಸಿ ಪರಿಸರ ಸೇವೆಯಲ್ಲಿ ಮತ್ತು ರೈತ ಸಮುದಾಯಕ್ಕೆ ನೆರವಾಗುವ ಕಾರ್ಯ ಮಾಡಿದ್ದರು. ಈ ಕಾರ್ಯವನ್ನು ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ಸ್ವಾಗತಾರ್ಹ. ಆದರೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಾಮೇಗೌಡರ ಪುತ್ರನಿಗೆ ಸರ್ಕಾರಿ ಕೆಲಸ ಒದಗಿಸಲು ಸಾಧ್ಯವಾಗಿಲ್ಲ. ಇದು ಮನ್ ಕಿ ಬಾತ್ ಮತ್ತು ಸರ್ಕಾರದ ನಕಲಿತನಕ್ಕೆ ಸಾಕ್ಷಿಯಾಗಿದೆ.
ಮುಖ್ಯಮಂತ್ರಿಗಳೇ ಸೂಚಿಸಿದ ಕೆಲಸವೂ ಈ ಸರ್ಕಾರದಲ್ಲಿ ಆಗುವುದಿಲ್ಲ. 40% ಕಮಿಷನ್ ಸಿಗದ ಕಾರಣಕ್ಕೆ ಸರ್ಕಾರದ ಕಾರ್ಯಕ್ಷಮತೆ ಕುಸಿದಿರಬಹುದು ಎನ್ನುವ ಅನುಮಾನ ಗೋಚರಿಸುತ್ತಿದೆ. ಸರ್ಕಾರದ ಭರವಸೆ ಕೇವಲ ಪೇಪರ್ ಮೇಲೆ ಮಾತ್ರ ಉಳಿಯಬಾರದು. ಆದಷ್ಟು ಬೇಗ ಕಾಮೇಗೌಡರ ಕುಟುಂಬದ ವಿವರಗಳನ್ನು ಸರ್ಕಾರ ತರಿಸಿಕೊಂಡು ಅಗತ್ಯ ನೆರವನ್ನು ಒದಗಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
