ಬೆಂಗಳೂರು:ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭ ಆಯೋಜಿಸಲು ಅನುದಾನ ನೀಡುವಂತೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ.
ಗೃಹಲಕ್ಷ್ಮಿ ಯೋಜನೆಯನ್ನು ಮೈಸೂರಿನಲ್ಲಿ ಉದ್ಘಾಟಿಸುತ್ತಿದ್ದು, ರಾಜ್ಯದ ಎಲ್ಲ ಫಲಾನುಭವಿಗಳು ಏಕಕಾಲದಲ್ಲಿ ಭಾಗವಹಿಸಲು ಸ್ಥಳಿಯವಾಗಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಲಾಗಿದೆ.ಸರ್ಕಾರ ಇದಕ್ಕೆ ತಗಲುವ ವೆಚ್ಚ ನೀಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಧೈಯೋದ್ದೇಶದೊಂದಿಗೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000ರೂ. ನೀಡುವ ಗೃಹಲಕ್ಷಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಲಾನುಭವಿಗಳು ಏಕ ಕಾಲದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತಿಗಳಲ್ಲಿ ಲಭ್ಯವಿರುವ ಮೈದಾನ ಅಥವಾ ಸಮುದಾಯ ಭವನಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಪ್ರತಿಯೊಂದು ಗ್ರಾಮ ಪಂಚಾಯತಿಯ ಸ್ಥಳೀಯ ಕಾರ್ಯಕ್ರಮದಲ್ಲಿ ಕನಿಷ್ಟ 250 ಫಲಾನುಭವಿಗಳು ಭಾಗವಹಿಸುಂತೆ ಮಾಡಬೇಕು. ಪ್ರತೀ ಕಾರ್ಯಕ್ರಮದ ಸ್ಥಳದಲ್ಲಿ ಒಂದು ಟಿವಿ ಮತ್ತು ಎಲ್ಇಡಿ ಪರದೆಯನ್ನು ವ್ಯವಸ್ಥೆ ಮಾಡಿ ಮೈಸೂರಿನ ಕಾರ್ಯಕ್ರಮದ ನೇರಪ್ರಸಾರವನ್ನು ಎಲ್ಲರೂ ನೋಡಲು ವ್ಯವಸ್ಥೆಮಾಡುವಂತೆ ಎಂದು ತಿಳಿಸಲಾಗಿದೆ. ಆದರೆ ಕೆಲವು ಗ್ರಾಮ ಪಂಚಾಯತಿ ಹೋರತುಪಡಿಸಿದರೆ, ಬಹುತೇಕ ಗ್ರಾಮ ಪಂಚಾಯತಿಗಳು ಆರ್ಥಿಕವಾಗಿ ದುರ್ಭಲವಾಗಿದ್ದು ಮೇಲಿನ ಕಾರ್ಯಕ್ರಮದ ಆಯೋಜನೆ ಬಹಳ ಕಷ್ಟಸಾಧ್ಯವಾದದ್ದಾಗಿರುತ್ತದೆ.
ಆದ್ದರಿಂದ ಸದರಿ ಕಾರ್ಯಕ್ರಮನ್ನು ಆಯೋಜಿಸಲು ಬೇಕಾಗುವ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವಂತೆ ಸೂಕ್ತಕ್ರಮ ಕೈಗೊಳ್ಳಬೇಕು. ಆ ಮೂಲಕ ಗ್ರಾಮ ಪಂಚಾಯತಿಗಳಿಗಾಗುವ ಆರ್ಥಿಕ ಹೊರೆಯನ್ನು ತಪ್ಪಿಸಬೇಕೆಂದು ಕಾಡಶೆಟ್ಟಿಹಳ್ಳಿ ಸತೀಶ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:14 − nine =
Remember me
