ಚಾಮರಾಜನಗರ:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವರಾದ ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿದಂತೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತಿಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್​ ಬಗ್ಗೆ ಮಾತನಾಡಿದರು.
ಇದನ್ನೂ ಓದಿ:ಕಾಶಿಯ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳು ಪೂಜೆ ಮುಂದುವರಿಸಲು ಸುಪ್ರೀಂ ಕೋರ್ಟ್ ಅನುಮತಿ
“ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ವರುಣಾದ ಜನರಿಂದ ನಾನು ಎರಡು ಬಾರಿ ಮುಖ್ಯಮಂತ್ರಿಯಾದೆ. ಈಗಲೂ ನನಗೆ ಮತ ನೀಡುತ್ತಿರುವುದು ಎಂದು ಭಾವಿಸಿ ನಮ್ಮ ಅಭ್ಯರ್ಥಿಗೆ ಮತ ನೀಡಿ. ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್​ರನ್ನು ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ ಎಂದು ಮನವಿ ಮಾಡುತ್ತೇನೆ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ, ನನ್ನ ರಾಜಕೀಯ ಶಕ್ತಿಯೂ ಹೆಚ್ಚುತ್ತದೆ. ಇದಕ್ಕೆ ನೀವೆಲ್ಲರೂ ಬೆಂಬಲಿಸಬೇಕು” ಎಂದರು.
“ನಮ್ಮ ಕಾಂಗ್ರೆಸ್ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಅಧಿಕವಾಗಿದೆ. ಪುರುಷರ ಹಣವೂ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ” ಎಂದರು.
ಇದನ್ನೂ ಓದಿ:ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನದಿಂದ ಉಚಿತ ಬೇಸಿಗೆ ಶಿಬಿರ
“ಪ್ರಧಾನಿ ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್​ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ, ರಸಗೊಬ್ಬರ ಬೆಲೆ ಕಡಿಮೆಯಾಗುತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ? 56 ಇಂಚಿನ ಖಾಲಿ ಎದೆ ಇದ್ದರೆ ಸಾಲದು, ಅದರೊಳಗೆ ಮಾತೃ ಹೃದಯ ಇರಬೇಕು. ಇಲ್ಲದಿದ್ದರೆ ಹೀಗೇ ಆಗೋದು. ಉದ್ಯೋಗ ಸೃಷ್ಟಿ‌ ಆಗೋದಿಲ್ಲ. ರೈತರ ಆದಾಯವೂ ದುಪ್ಪಟ್ಟಾಗುವುದಿಲ್ಲ” ಎಂದು ಪಿಎಂ ವಿರುದ್ಧ ವಾಗ್ದಾಳಿ ನಡೆಸಿದರು.
“ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ” ಎಂದು ಹೇಳಿದರು.
2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

ಈ ಹೋಟೆಲ್​ಗೆ ಮಾತ್ರ ಹೋಗಲೇಬೇಡಿ! ಇಲ್ಲಿಗೆ ಹೋದ್ರೆ ಖಂಡಿತ ಅವಮಾನ, ಕಣ್ಣೀರು ತಪ್ಪಿದ್ದಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
