ಬೆಂಗಳೂರು:ಕೆರೆ ತುಂಬಿಸುವ ಹಾಗೂ ಬ್ಯಾರೇಜ್ ನಿರ್ಮಾಣದಂತಹ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸಸೌಧದಲ್ಲಿ ಆಯೋಜಿಸಿದ್ದ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿಯ ಮಾಹಿತಿಯನ್ನು ಪಡೆದುಕೊಂಡರು.
ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಲು ಅಧಿಕಾರಿಗಳು ಆದ್ಯತೆ ನೀಡಬೇಕು. ಕಾಮಗಾರಿಗಳಿಗಿರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಕಾಲಕಾಲಕ್ಕೆ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸುವುದರಿಂದ ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಒತ್ತು ನೀಡಬೇಕು ಎಂದು ಸೂಚನೆ ನೀಡಿದರು.
ನಮ್ಮ ಇಲಾಖೆಯಿಂದ ಕೈಗೊಳ್ಳುವ ಬಹುತೇಕ ಕಾಮಗಾರಿಗಳು ಏತ ನೀರಾವರಿ ಯೋಜನೆಯ ಅಡಿಯಲ್ಲಿ ಕೆರೆಗಳನ್ನು ತುಂಬಿಸುವಂತಹವುಗಳಾಗಿವೆ. ಕೆರೆತುಂಬಿಸುವ ಹಾಗೂ ಬ್ಯಾರೇಜ್ ನಿರ್ಮಾಣದಂತಹ ಕಾಮಗಾರಿಗಳು ರೈತರಿಗೆ ಅನುಕೂಲ ಮಾಡಿಕೊಡುತ್ತವೆ. ಕೆರೆಗಳ ನಿರ್ಮಾಣ, ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಬ್ಯಾರೇಜ್ ನಿರ್ಮಾಣ ಕಾರ್ಯಕ್ಕೆ ಒತ್ತು ನೀಡಬೇಕು. ಈ ಕಾರ್ಯಗಳಿಂದ ಅಂತರ್ಜಲ ಹೆಚ್ಚಾಗುವುದಲ್ಲದೆ, ಮಳೆಯ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. ಈ ಹಿನ್ನಲೆಯಲ್ಲಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಬೋಸರಾಜು ತಿಳಿಸಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen − 1 =
Remember me
