ಬೆಂಗಳೂರು:ನಾನು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಮಾಡುವವರು ಬೇಕಾ ಅಥವಾ ಐದು ವರ್ಷಕ್ಕೊಮ್ಮೆ ಬಂದು ಕಣ್ಣೀರು ಹಾಕುವವರು ಬೇಕಾ? 10 ವರ್ಷಗಳ ಹಿಂದೆ ಕ್ಷೇತ್ರ ಹೇಗಿತ್ತು? ಈಗ ಏನೆಲ್ಲ ಆಗಿದೆ ಎಂಬುದನ್ನು ಮತದಾರರೇ ಅವಲೋಕಿಸಲಿ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಕೊಡಿಗೇಹಳ್ಳಿ, ಸೂಲಿಕೆರೆ, ರಾಮೋಹಳ್ಳಿ, ಚುಂಚನಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ:ಅಭಿವೃದ್ಧಿಗಾಗಿ ಕಮಲಕ್ಕೆ ಮತ ಚಲಾಯಿಸಿ: ಮತದಾರರಿಗೆ ಮಹದೇವಪುರ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಮನವಿ
ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮೂಲಸೌಕರ್ಯಕ್ಕೆ ಒತ್ತು ನೀಡಿದ್ದೇನೆ. ಶೇ.70- 80 ಕಾಮಗಾರಿ ಮುಕ್ತಾಯವಾಗಿವೆ. ಕೋವಿಡ್ ಸಂದರ್ಭದಲ್ಲಿ ಜನತೆಯ ಕಷ್ಟಕ್ಕೆ ಸ್ಪಂದಿಸಿದ್ದೇನೆ ಎಂದರು. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು, ಮಂಚನಬೆಲೆ ಜಲಾಶಯದಿಂದ ನೀರು ಪೂರೈಸುವ ಕಾಮಗರಿಗೆ ಚಾಲನೆ ನೀಡಲಾಗಿದೆ. ರಸ್ತೆ, ಚರಂಡಿ ಮತ್ತಿತರ ಮೂಲಸೌಕರ್ಯ ಒದಗಿಸಲಾಗಿದೆ. ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ನೀಡಿ ಎಂದರು.
ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ನಾನು ಮತಯಾಚಿಸುತ್ತಿದ್ದೇನೆ. ಮತದಾರರು ಅಭಿವೃದ್ಧಿಗೆ ಮನ್ನಣೆ ನೀಡಲಿದ್ದಾರೆ. ವರ್ಷಪೂರ್ತಿ ಒಂದಿಲ್ಲೊಂದು ಕಾರ್ಯಕ್ರಮ ಮಾಡುತ್ತ ಜನರ ಜೊತೆಗೆ ನಿಂತಿದ್ದೇನೆ. ಯಾವುದೇ ಜಮೀನಿಗೆ ಬೇಲಿ ಹಾಕಿಲ್ಲ, ಯಾರೊಬ್ಬರಿಗೂ ಅನ್ಯಾಯ ಮಾಡಿಲ್ಲ.
| ಎಸ್.ಟಿ. ಸೋಮಶೇಖರ್ ಯಶವಂತಪುರ ಬಿಜೆಪಿ ಅಭ್ಯರ್ಥಿ
ಯಶವಂತಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ; ಎಸ್​.ಟಿ. ಸೋಮಶೇಖರ್​ ವಿಶ್ವಾಸ

ಮೂಲಸೌಕರ್ಯಕ್ಕೆ ವಿಶೇಷ ಆದ್ಯತೆ: ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಭರವಸೆ

ಯಶವಂತಪುರ ಕ್ಷೇತ್ರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
