ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಕಟುವಾಗಿ ಟೀಕಿಸಿದರು.
ಜೆ.ಪಿ. ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ ನೀರಿಗಾಗಿ ಹೋರಾಟ ನಡೆಸಿ ಹೇಮಾವತಿ, ಕಬಿನಿ, ಹಾರಂಗಿ ಅಣೆಕಟ್ಟು ಕಟ್ಟಿಸಿದವನು ನಿಮ್ಮ ಮುಂದೆ ಕೂತಿದ್ದೇನೆ. ಹೇಮಾವತಿಯಲ್ಲಿ ನೀರಿದೆ. ಅಲ್ಲಿನ ಹಳ್ಳಿಗಳಿಗೂ ಆ ನೀರು ಕೊಡಿ, ಬೆಂಗಳೂರಿಗೂ ನೀರು ಕೊಡಿ. ಕೆ.ಆರ್.ಎಸ್‌ನಲ್ಲಿ 90 ಅಡಿಗೆ ಬಂದಿದೆ. ಹೇಮಾವತಿಯಲ್ಲಿ 23 ಟಿಎಂಸಿ ನೀರಿದೆ. ಜನರಿಗೆ ಕೊಡಲು ನಿಮಗೆ ಸಮಸ್ಯೆ ಏನು? ಜನರು ನೀರಿಗಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದೆ. ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮಾರ್ಚ್ 7ರ ಒಳಗೆ ನೋಂದಣಿ ಮಾಡಿಕೊಳ್ಳದ ಟ್ಯಾಂಕರ್‌ಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಡಿಸಿಎಂ ಹೇಳಿದ್ದಾರೆ ಎಂದು ಸರ್ಕಾರದ ವಿರುದ್ಧ ಪ್ರಹಾರ ನಡೆಸಿದರು.ಒಂದು ಟ್ಯಾಂಕರ್ ನೀರಿಗೆ 2500 ರೂ.ಗಳಿಂಧ 3,000 ಕೊಡಬೇಕು. 10 ತಿಂಗಳಲ್ಲಿ ನೀವು ಎಷ್ಟು ಕಡೆ ಪ್ರವಾಸ ಮಾಡಿದ್ದೀರಾ? 20 ದಿನ ಅಧಿವೇಶನ, ಸಭೆ, ಮಂತ್ರಿಗಳ ಮನೆ ಊಟಕ್ಕೆ 4 ದಿನ ಕಳೆದಿರಿ. ಬಾಕಿ ದಿನ ಏನು ಮಾಡಿದಿರಿ ನೀವು? ಗ್ಯಾರಂಟಿ ಯೋಜನೆ ಉಸ್ತುವಾರಿಗೆ ಮಾಜಿ ಮಂತ್ರಿಗಳ ನೇತೃತ್ವದಲ್ಲಿ ಸಮಿತಿ ಮಾಡಿದ್ದೀರಿ. 95 ಜನರಿಗೆ ಕ್ಯಾಬಿನೆಟ್‌ದರ್ಜೆ!! ಆಹಾ.. ಎಂತಹ ಆಡಳಿತ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ವೃಷಭಾವತಿ ನೀರನ್ನು ನೆಲಮಂಗಲಕ್ಕೆ ಎತ್ತುತ್ತೇವೆ ಎನ್ನುತ್ತಾರೆ. ಮೂರು ತಿಂಗಳ ಹಿಂದೆ ಹೇಮಾವತಿ ನೀರು ನೆಲಮಂಗಲಕ್ಕೆ ತರುತ್ತೇನೆ ಅಂದರು. ಸಮಯಕ್ಕೆ ಸಂದರ್ಭಕ್ಕೆ ಅನುಸಾರವಾಗಿ ಹೇಳಿಕೆ ನೀಡುವ ನಿಮ್ಮನ್ನು ಜನ ನಂಬ್ತಾರೇನ್ರಿ? ಈ ನಾಲಿಗೆಯಲ್ಲಿ ಯಾವ ಯಾವ ಸಮಯಕ್ಕೆ ಏನೇನು ಹೇಳ್ತೀರಾ? ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ 15 ದಿನಕ್ಕೊಮ್ಮೆ ಮಾತ್ರ ನೀರು ಬರುತ್ತಿದೆ. ಕಾವೇರಿ ನೀರಿಗೆ ಜನರು ಚಾತಕ ಪಕ್ಷಿಯಂತೆ ಕಾಯುದ್ದಾರೆ. ಪಾಪ ಈ ಜನ 5 ಗ್ಯಾರಂಟಿ ಸಿಕ್ಕಿದವು ಎಂದು ಸಂತೋಷವಾಗಿ ಇದ್ದಾರೆ! ಎಂದು ನೀರಿನ ಅಭಾವದ ಬಗ್ಗೆ ದೇವೇಗೌಡರು ಕಳವಳ ವ್ಯಕ್ತಪಡಿಸಿದರು.ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಯೋಜನೆ ಮಾಡಿದ್ದು. ಆದರೆ, ಅರಸೀಕೆರೆಗೆ ನೀರು ಕೊಡಲು ನಮಗೆ ವಿರೋಧ ಇಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹೇಮಾವತಿಯಿಂದ ಅರಸಿಕೆರೆಗೆ ನೀರು ಕೊಟ್ಟಿದ್ದರು. ಆ ವಿಷಯವನ್ನು ಈಗ ಹೇಳಲಿ ನೋಡೋಣ. ಹೇಳಲಿ ಯೋಗ್ಯತೆ ಇದ್ದರೆ ಎಂದು ಹಾಸನದಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಭಾಷಣದ ಮಾಡಿದ ನಾಯಕರಿಗೆ ದೇವೇಗೌಡರು ತಿರುಗೇಟು ಕೊಟ್ಟರು.ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಹಾಜರಿದ್ದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:10 − 3 =
Remember me
