ಬೆಂಗಳೂರು:ಪೊಲೀಸ್ ಕಾನ್​ಸ್ಟೆಬಲ್ ಹುದ್ದೆಯ ಪ್ರಸ್ತುತ ನೇಮಕಾತಿ ಆಯ್ಕೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಎಸ್ಸಿ, ಎಸ್ಟಿ, ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷಕ್ಕೆ ವಯೋಮಿತಿ ಸಡಿಲಿಕೆ ಮಾಡುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮನವಿ ಪತ್ರದಲ್ಲೇನಿದೆ?: ಪೊಲೀಸ್ ಸಬ್ ಇನ್​ಸ್ಪೆಕ್ಟರ್​ಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿತ್ತು. ಆದರೆ, ಕಾನ್​ಟ್ಟ್ಟೆಬಲ್​ಗಳಿಗೆ ಮಾಡಲಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕಾನ್​ಸ್ಟೆಬಲ್ ಹುದ್ದೆಗೆ ಅರ್ಹತೆ ಹೊಂದಿರುವ ಸಾಕಷ್ಟು ಅಭ್ಯರ್ಥಿಗಳಿದ್ದಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ ಹಾಗೂ ಎಸ್ಸಿ, ಎಸ್ಟಿ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ ವಯೋಮಿತಿ ಇರುವ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಬೇರೆ ರಾಜ್ಯಗಳಲ್ಲಿ ಕಾನ್​ಸ್ಟ್ಟೆಬಲ್ ಹುದ್ದೆಗೆ 30 ವರ್ಷಗಳಿಗಿಂತ ಹೆಚ್ಚಿನ ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 3 =
Remember me
