ಬೆಂಗಳೂರು:ಇಸ್ರೇಲ್​ನಲ್ಲಿ ಹಮಾಸ್ ಉಗ್ರರಿಂದ ದಾಳಿ ನಡೆದು ರಣಭೀಕರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಅಲ್ಲಿ ಇನ್ನೂ ಪ್ರಕ್ಷುಬ್ಧ ವಾತಾವರಣ ಇದೆ. ಈ ಮಧ್ಯೆ ಅಲ್ಲಿನ ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸುವಂಥ ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲೇ ನಡೆಯುತ್ತಿದೆ.
ಮೊನ್ನೆಯಷ್ಟೇ ಎಂ.ಜಿ.ರಸ್ತೆಯಲ್ಲಿ ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ, ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ಪೊಲೀಸರು 25 ಜನರನ್ನು ಬಂಧಿಸಿ ಬಿಡುಗಡೆ ಮಾಡಿದ್ದರು. ಇದೀಗ ಪ್ಯಾಲೆಸ್ತೀನಿಯರನ್ನು ಬೆಂಬಲಿಸಿ ಮತ್ತೊಂದು ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿರುವುದು ಬಹಿರಂಗಗೊಂಡಿದೆ.
ಇದನ್ನೂ ಓದಿ:ಐಸ್​ ಕ್ರೀಮ್​ ಟ್ರಕ್​ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ​​ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!
ಮಾಜಿ ಸಚಿವ ಬಸನಗೌಡ ಪಾಟೀಲ್ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನ ಸೆಳೆದಿದ್ದು, ಇಂಥದ್ದೊಂದು ಬೆಳವಣಿಗೆಗೆ ಸಂಬಂಧಿಸಿದಂತೆ ತಮ್ಮ ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ.
ಪ್ಯಾಲೆಸ್ತೀನಿಯರನ್ನು ಬೆಂಬಲಿಸಿ ಗ್ಲೋಬಲ್ ಡೇ ಆಫ್ ಫಾಸ್ಟಿಂಗ್ ಎಂಬ ಉಪವಾಸ ಅಭಿಯಾನ ನಾಳೆ ಜಾಗತಿಕವಾಗಿ ನಡೆಯಲಿದ್ದು, ಅದಕ್ಕೆ ಬೆಂಬಲಿಸುವಂತೆ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ವಾಟ್ಸ್​ಆ್ಯಪ್ ಸ್ಟೇಟಸ್ ಹಾಕಿಕೊಂಡು ಕರೆ ಕೊಟ್ಟಿರುವ ಸಂಗತಿಯನ್ನು ಯತ್ನಾಳ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಿಯಮಗಳನ್ನು ಮೀರಿ ಸರ್ಕಾರಿ ಅಧಿಕಾರಿ ಯಾಕೆ ಇಂಥ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು, ಈ ಅಧಿಕಾರಿ ಪದೇಪದೆ ಅಪರಾಧ ಮಾಡುತ್ತಿದ್ದಾರೆ ಎಂದು ಯತ್ನಾಳ್ ಟೀಕಿಸಿದ್ದು, ತೀವ್ರ ಅಸಮಾಧಾನವನ್ನು ಕೂಡ ವ್ಯಕ್ತಪಡಿಸಿದ್ದಾರೆ.
Chief Minister Siddaramaiah and DK Shivakumar were advocating Secularism to Officers in Karnataka.
Now in Congress Ruled Karnataka Government Mohammad Mohsin, IAS Officer gives a call to join Muslims globally fasting in solidarity with Palestine.
Why should officers involved in…pic.twitter.com/ilH4DbgOeQ
— Basanagouda R Patil (Yatnal) (@BasanagoudaBJP)October 18, 2023

#NoBindiNoBusiness | ಹಿಂದೂಗಳಿಂದ ಮತ್ತೆ ಅಭಿಯಾನ, ಟ್ರೆಂಡ್ ಆಯ್ತು ಕ್ಯಾಂಪೇನ್..
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − 6 =
Remember me
