ಬೆಂಗಳೂರು: ರಾಜ್ಯ ಸರ್ಕಾರವನ್ನು ಉರುಳಿಸಲು ಸಿಂಗಾಪುರದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿ, ಹೋಗೋರೆಲ್ಲ ಹೋಗಿ ಅಲ್ಲಿ ಚರ್ಚೆ ಮಾಡಲಿ ಎಂದು ಹೇಳಿದ್ದಾರೆ.
ಎಲ್ಲವೂ ಚರ್ಚೆ ಆಗಬೇಕಲ್ಲವೇ, ಹೋಗೋರೆಲ್ಲ ಹೋಗಿ ಅಲ್ಲಿ ಚರ್ಚೆ ಮಾಡಲಿ. ಇಲ್ಲಿ ಇರುವವರೆಲ್ಲ ಇಲ್ಲೇ ಚರ್ಚೆ ಮಾಡಲಿ. ಎಲ್ಲೆಲ್ಲಿ ಏನೇನಾಗುತ್ತಿದೆ ಎಂದು ನಮಗೆ ಮಾಹಿತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದಿದ್ದರು.ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದು ಹೇಳಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + nine =
Remember me
