ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್​ಲೈನ್ಸ್​ ಸಿಬ್ಬಂದಿ ಎಡವಟ್ಟು ಮಾಡಿಕೊಂಡು, ಪ್ರಯಾಣಿಕರನ್ನು ಟರ್ಮಿನಲ್​ನಲ್ಲೇ ಬಿಟ್ಟು ವಿಮಾನ ಟೆಕ್ ಆಪ್ ಆದ ಘಟನೆ ವರದಿಯಾಗಿತ್ತು. ಇದೀಗ ಪ್ರಯಾಣಿಕರು ಬರುವ ಮುನ್ನವೇ ವಿಮಾನ ಟೇಕ್​ಆಪ್‌ ಆಗಿರುವುದಕ್ಕೆ ಗೋ ಫಸ್ಟ್ ಏರ್ಲೈನ್ಸ್ ಸಂಸ್ಥೆ ತನ್ನ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಿದೆ.
ಬಸ್​ನಲ್ಲಿ ಬರುತ್ತಿದ್ದ 54 ಜನ ಪ್ರಯಾಣಿಕರನ್ನು ಬಿಟ್ಟು ವಿಮಾನ ಹಾರಿದೆ. ಈ ಘಟನೆ ನಿನ್ನೆ (ಜ.9) ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ G8 116 ನಂಬರ್​ನ ಗೋಫಸ್ಟ್ ವಿಮಾನ ಹೊರಟಿತ್ತು. ಮೊದಲನೇ ಟ್ರಿಪ್​​ನಲ್ಲಿ ವಿಮಾನಕ್ಕೆ‌ ಬಸ್​ನಲ್ಲಿ ಹೋಗಿ 50 ಜನ ಪ್ರಯಾಣಿಕರು ಹತ್ತಿದ್ದರು.
ಎರಡನೇ ಟ್ರಿಪ್​​ನಲ್ಲಿ 54 ಜನರನ್ನು ಟರ್ಮಿನಲ್​​ನಿಂದ ವಿಮಾನದ ಬಳಿಗೆ ಬಸ್ ಕರೆದೊಯ್ಯಬೇಕಿತ್ತು. ಆದರೆ, ಬಸ್​ ಪ್ರಯಾಣಿಕರನ್ನು ಕರೆತರುವ ಮುನ್ನವೆ ವಿಮಾನ ಟೇಕಾಫ್​ ಆಗಿದೆ. ಪ್ರಯಾಣಿಕರನ್ನು ಗಮನಿಸದೆ ಏರ್​ಲೈನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ ಅಂತ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್​ಲೈನ್ಸ್​ ವಿರುದ್ಧ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಅಸಮಾಧಾನ ಹೊರ ಹಾಕಿದ್ದಾರೆ.
ಈ ಕುರಿತ ಟ್ವಿಟರ್​ನಲ್ಲಿ ಗೋಫಸ್ಟ್ ಮತ್ತು ಡಿಜಿಸಿಎಗೆ 50 ಕ್ಕೂ ಅಧಿಕ‌ ಪ್ರಯಾಣಿಕರು ಟ್ವೀಟ್​ ಮಾಡಿ ಸಮಯಕ್ಕೆ ಸರಿಯಾಗಿ ಹೋಗಲು ಆಗಿಲ್ಲ ಅಂತ ಬೇಸರ ಹೊರಹಾಕಿದ್ದಾರೆ. ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಂತೆ ಟ್ವಿಟರ್​ನಲ್ಲಿ ಗೋಫಸ್ಟ್ ಸಂಸ್ಥ ಕ್ಷಮೆ ಕೇಳಿದೆ. ಪ್ರಯಾಣಿಕರ ಮಾಹಿತಿ ಪಡೆದುಕೊಂಡು ಏರ್​ಲೈನ್ಸ್​ ಸಂಸ್ಥೆ ಟ್ವೀಟ್​ ಮಾಡಿ ಕ್ಷಮೆ ಕೇಳಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
