ಬೆಂಗಳೂರು:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ಗಲಾಟೆ ಚರ್ಚೆಗೆ ಬಂದಿದೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಮೇಕೆದಾಟು, ಮಹದಾಯಿ ಯೋಜನೆಯನ್ನು ಏಕೆ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಕೇಳಿದ ಪ್ರಶ್ನೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!
ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಟ್ಟೀಟ್​ ಮಾಡಿರುವ ಕುಮಾರಸ್ವಾಮಿ,  ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಡಿಕೆ ಶಿವಕುಮಾರ್ ರವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


ಡಿಕೆಶಿ ಸುಳ್ಳು ಫ್ಯಾಕ್ಟರಿಯ ಮೇಟಿ:ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ, ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ. ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ. ಹೌದಲ್ಲವೇ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರ್ಕಾರ. ಆ ಸರ್ಕಾರದಲ್ಲಿ ನೀವು ಸಚಿವರಿದ್ದೀರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ. ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು ಕುಮಾರಸ್ವಾಮಿ ಕಿಡಿಕಾಡಿದ್ದಾರೆ.
2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, 100 ಕೋಟಿ ರೂ. ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್​ ಸರ್ಕಾರ ಇತ್ತಲ್ಲಾ. ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ ಎಂದು ಹೇಳಿದ್ದಾರೆ.
ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ:ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ ಎಂದು ಹೇಳಿದರು.
90ರ ಇಳಿವಯಸ್ಸಿನಲ್ಲಿಯೂ ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು. ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ. ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ ಎಂದು ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಸರ್ಕಾರದಲ್ಲಿ ಏನೇನ್ ನಡೀತಿದೆ ಶಿವಕುಮಾರ್ ಅವರೇ, ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ.. ಹೇಗೆ ಎಂದು ವ್ಯಂಗ್ಯವಾಡಿದ್ದಾರೆ.

ಅಶ್ವಿನಿ ಪುನೀತ್​​ರಾಜ್​ಕುಮಾರ್​ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + four =
Remember me
