ವಿಜಯವಾಣಿ ಸುದ್ದಿಜಾಲ ಕೆಆರ್​ಎಸ್(ಮಂಡ್ಯ)
ಮೇಕೆದಾಟು ಯೋಜನೆ ಮಾಡುವುದು ನಮ್ಮ ಹಕ್ಕು. ಆದರೆ ರಾಜಕಾರಣ ಕಾರಣಕ್ಕೆ ತಮಿಳುನಾಡು ಖ್ಯಾತೆ ತೆಗೆಯುತ್ತದೆ. ಇವತ್ತಿನವರೆಗೂ ಕೇಂದ್ರ ಸರ್ಕಾರ ಯೋಜನೆಗೆ ಮಂಜೂರಾತಿ ಕೊಟ್ಟಿಲ್ಲ. ಮಂಡ್ಯ ಸಂಸದರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಯೋಜನೆಗೆ ಒಪ್ಪಿಗೆ ಕೊಡಿಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಆರ್​ಎಸ್​ಗೆ ಸೋಮವಾರ ಬಾಗಿನ ಸಮರ್ಪಣೆ ಬಳಿಕ ವೇದಿಕೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಾವೇರಿ ವಿವಾದ 4 ರಾಜ್ಯಗಳಿಗೆ ಸಂಬಂಧಿಸಿದ್ದಾಗಿದೆ. ಜಲವಿವಾದ ಸುಪ್ರೀಂ ಕೋರ್ಟ್​ನಲ್ಲಿ ತೀರ್ಮಾನ ಆಗಲಿದೆ. ಈ ವರ್ಷ ನಿಗದಿಗಿಂತ ಹೆಚ್ಚು ನೀರು ಹೋಗುವ ಸಾಧ್ಯತೆಯಿದೆ. ಮೆಟ್ಟೂರು ಜಲಾಶಯ ಭರ್ತಿ ಬಳಿಕ ನೀರು ಸಮುದ್ರ ಸೇರಲಿದೆ. ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಯೋಜನೆ ಆಗಬೇಕು. ಇದರಿಂದಾಗಿ 65 ಟಿಎಂಸಿ ನೀರು ಸಂಗ್ರಹಿಸಬಹುದು. ವಿದ್ಯುತ್ ತಯಾರಿಸಬಹುದು, ಬೆಂಗಳೂರು, ತಮಿಳುನಾಡಿಗೆ ನೀರು ಕೊಡಬಹುದು. ಹಾಗೆ ನೋಡಿದರೆ ಈ ಯೋಜನೆಯಿಂದ ತ.ನಾಡಿಗೆ ಹೆಚ್ಚಿನ ಅನುಕೂಲ ಎಂದರು.
ಮೇಕೆದಾಟು ಬಗ್ಗೆ ಬಿಜೆಪಿ, ಜೆಡಿಎಸ್ ಸಂಸದರು ಮಾತನಾಡಲ್ಲ. ಕರ್ನಾಟಕಕ್ಕೆ ಅನ್ಯಾಯದ ಬಗ್ಗೆ ಅವರು ಧ್ವನಿ ಎತ್ತುವುದಿಲ್ಲ. ಅದನ್ನು ಬಿಟ್ಟು ಕೆಲಸಕ್ಕೆ ಬಾರದ ವಿಚಾರ ಮಾತ್ರ ಮಾತನಾಡುತ್ತಾರೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಜೆಡಿಎಸ್, ಬಿಜೆಪಿಯವರಿಂದ ನಮ್ಮ ಸರ್ಕಾರ ಬಂದಿಲ್ಲ. ಆದರೆ ಸುಳ್ಳು ಆರೋಪ ಮಾಡಿ ಸರ್ಕಾರ ದುರ್ಬಲ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕೃತಿ ವಿಕೋಪದಿಂದ ಅಣೆಕಟ್ಟು ಹಲವು ಬಾರಿ ತುಂಬಿಲ್ಲ. ಮೂರನೇ ಬಾರಿ ಬಾಗಿನ ಅರ್ಪಿಸಿದ್ದೇನೆ. ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಣೆ ಮಾಡಿ ಪ್ರತಿವರ್ಷ ಇದೇ ರೀತಿ ತುಂಬಲಿ ಎಂದು ಪ್ರಾರ್ಥಿಸಿದ್ದೇನೆ. ಕೆಲವೊಮ್ಮೆ ನಮ್ಮ ನಿರೀಕ್ಷೆಯಂತೆ ಮಳೆಯಾಗಲ್ಲ. ಜುಲೈನಲ್ಲೇ ಈ ಬಾರಿ ಜಲಾಶಯಗಳು ತುಂಬಿವೆ ಎಂದರು.
ಬಿತ್ತನೆ ಬೀಜ ವಿತರಣೆ :ಕೃಷಿ ಇಲಾಖೆಯ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮೈಸೂರಿನಲ್ಲಿ ಚಾಲನೆ ನೀಡಿದರು. ಕೆ-ಕಿಸಾನ್ ತಂತ್ರಾಂಶದ ಮುಖಾಂತರ ರೈತರಿಗೆ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ ಮಾಡುವ ಯೋಜನೆ ಇದಾಗಿದೆ.
ತಮಿಳುನಾಡಿಗೆ ನಾನು ಅಥವಾ ಸಿಎಂ ಸಿದ್ದರಾಮಯ್ಯ ನೀರು ಬಿಟ್ಟಿಲ್ಲ. ತಾಯಿ ಕೃಪೆಯಿಂದ ಹೆಚ್ಚು ಮಳೆ ಬಂದ ಕಾರಣ ನೀರು ಅವರಿಗೆ ಹೋಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಮಳೆ ಬರಲಿಲ್ಲ, ನೀರು ಬರಲಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಮೇಲಿರುವ ಮೋಡಕ್ಕೆ ಕೆಳಗೆ ಯಾವ ಸರ್ಕಾರ ಅಧಿಕಾರದಲ್ಲಿ ಇದೆ ಎನ್ನುವುದು ಗೊತ್ತಿರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಇದೇ ರೀತಿ ಉತ್ತಮವಾಗಿ ಮಳೆ ಬಂದರೆ ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಈ ವರ್ಷ ನೀಡಬಹುದು. ಕಳೆದ ವರ್ಷ 223 ತಾಲೂಕುಗಳಲ್ಲಿ ಬರ ಬಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ವಿಪಕ್ಷಗಳು ಟೀಕೆ ಮಾಡಿದ್ದವು. ಆದರೂ ನಾವು ಜನಪರವಾಗಿ ಕೆಲಸ ಮಾಡಿದೆವು. ಏಕೆಂದರೆ ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದರು.
ಮುಂದಿನ ವರ್ಷದಿಂದ ಬಾಗಿನ ಸಲ್ಲಿಕೆ ವೇಳೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುವ ಮೂವರು ನೀರುಗಂಟಿ, ಇಬ್ಬರು ಕಿರಿಯ ಇಂಜಿನಿಯರ್​ಗಳನ್ನು ಸನ್ಮಾನಿಸಲಾಗುವುದು ಎಂದು ಘೊಷಿಸಿದರು.
ಬೃಂದಾವನಕ್ಕೆ ಹೊಸ ರೂಪ:ಬೃಂದಾವನಕ್ಕೆ ಹೊಸ ರೂಪ ನೀಡುವ ಮೊದಲು ನಮ್ಮ ಜತೆ ಚರ್ಚೆ ನಡೆಸಿ ಎಂದು ರೈತರು ಹೇಳಿದ್ದಾರೆ. ಅವರ ಜತೆ ಚರ್ಚೆ ನಡೆಸಲಾಗುವುದು. ಯಾರ ಜಮೀನೂ ವಶಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಜಮೀನಿನಲ್ಲೇ ಅಭಿವೃದ್ಧಿ ಮಾಡಲಾಗುವುದು. ಇಷ್ಟವಿದ್ದವರು ಜಮೀನು ನೀಡಬಹುದು. ಅಣೆಕಟ್ಟಿನ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಮೈಸೂರು:ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು. ಈಗಲೂ ಸುಳ್ಳು ಹೇಳಿದ್ದಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡುವುದಾಗಿ ಘೊಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್​ನಲ್ಲಿ ಈ ಬಗ್ಗೆ ಪ್ರಸ್ತಾಪವೇ ಇಲ್ಲ. 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ್ದ 5495 ಕೋಟಿ ರೂ. ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೆರಿಫೆರಲ್ ರಿಂಗ್ ರೋಡ್​ಗೆ 3000 ಕೋಟಿ ರೂ. ಕೊಡುವುದಾಗಿ ಹೇಳಿದ್ದೂ ಇಲ್ಲ. 3000 ಕೋಟಿ ರೂ. ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಬಜೆಟ್​ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು. ಘೊಷಣೆ ಮಾಡಿದ ಅನುದಾನ ಕೊಡಿಸುತ್ತೇವೆಂದು ಕುಮಾರಸ್ವಾಮಿ ಪ್ರಸ್ತಾಪ ಮಾಡಬಹುದಿತ್ತು. ಅವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಮೇಕೆದಾಟು, ಕೈಗಾರಿಕೆಗೆ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್್ಸ, ಮೈಸೂರು ಅಥವಾ ಹಾಸನಕ್ಕೆ ಐಐಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು, ಅದೂ ಆಗಿಲ್ಲ. ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ಆದರೆ ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ ಶೇ.25ರೊಳಗೇ ಇದ್ದೇವೆ. ಅವರು 15 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ ಎಂದು ಟೀಕಿಸಿದರು.
ಪತ್ರಕರ್ತರ ಮೇಲಿನ ನಿರ್ಬಂಧ ತೆರುವುಗೊಳಿಸಿ: ವಿಪಕ್ಷ ನಾಯಕ ರಾಹುಲ್ ಗಾಂಧಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + seven =
Remember me
