ಬೆಂಗಳೂರು:ರಾಜ್ಯದಲ್ಲಿ ಬಂಡವಾಳ ಹೂಡಿ ಕೈಗಾರಿಕೆ ಸ್ಥಾಪಿಸಲು ಮುಂದೆ ಬಂದಿರುವ ಔಷಧ, ಜವಳಿ, ಸ್ಟೀಲ್ ಉದ್ಯಮಗಳು ಒಳಗೊಂಡ ಒಟ್ಟು 88 ಯೋಜನೆಗಳಿಗೆ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಅಸ್ತು ಎಂದಿದ್ದು, 2,367.99 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ.
ಖನಿಜ ಭವನದ ‘ಉದ್ಯೋಗ ಮಿತ್ರ’ ಸಭಾಂಗಣದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ಮಂಗಳವಾರ ನಡೆಯಿತು. 50 ಕೋಟಿ ರೂ.ಗೂ ಹೆಚ್ಚು ಬಂಡವಾಳ ಹೂಡಿಕೆಯ ಏಳು ಬೃಹತ್ ಮತ್ತು ಮಧ್ಯಮ ಯೋಜನೆಗಳಿಂದ ಒಟ್ಟು 799.1 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 3237 ಜನರಿಗೆ ಉದ್ಯೋಗ ಲಭಿಸಲಿವೆ.

15 ರಿಂದ 50 ಕೋಟಿ ರೂ. ಒಳಗಿನ 78 ಯೋಜನೆಗಳಿಗೆ ಅನುಮೋದಿಸಿದ್ದು, ಒಟ್ಟು 1431.74 ಕೋಟಿ ರೂ. ಹೂಡಿಕೆಯಾಗಲಿದೆ. ಅಲ್ಲದೆ, 7667 ಉದ್ಯೋಗಗಳು ಸೃಜನೆಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅಸ್ತು ಎಂದಿದ್ದು, 137.15 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಈಗಾಗಲೆ ವಿದೇಶಿ ನೇರ ಹೂಡಿಕೆಯಲ್ಲಿ (ಎಫ್ ಡಿಐ) ಕರ್ನಾಟಕ ಮೊದಲ ತ್ರೖೆಮಾಸಿಕ ಅವಧಿಯಲ್ಲಿ ಮೊದಲ ಸ್ಥಾನಕ್ಕೆ ಬಂದಿದ್ದು, ಬಂಡವಾಳ ಹೂಡಿಕೆಯಲ್ಲೂ ರಾಜ್ಯ ಅಗ್ರ ಸ್ಥಾನ ಪಡೆಯಲೆಂಬ ಉದ್ದೇಶದಿಂದ ಪ್ರಯತ್ನಗಳು ಸಾಗಿವೆ ಎಂದು ಇಲಾಖೆ ತಿಳಿಸಿದೆ.
ಪಿಸ್ತೂಲ್ ತೋರಿಸಿ ಬೆದರಿಸಿದ ಬಿಜೆಪಿ ಮುಖಂಡ; ಎಗ್​ರೈಸ್​ ಅಂಗಡಿ ವಿಚಾರಕ್ಕೆ ಜಗಳ

ಸಂಚಾರ ಪೊಲೀಸ್ ವ್ಯವಸ್ಥೆಯಲ್ಲಿ ಸಂಚಲನ; ಟೋಯಿಂಗ್​ಗೆ ಸದ್ಯದಲ್ಲೇ​ ಹೊಸ ನಿಯಮ: ಏನೇನಿರುತ್ತೆ ಷರತ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − twelve =
Remember me
