ಬೆಂಗಳೂರು:ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಾರ್ಚ್​ ತಿಂಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ 2024-25ನೇ ಬಜೆಟ್​ಅನ್ನು ಫೆಬ್ರವರಿ 16ರಂದು ಮಂಡಿಸಲಿದೆ ಎಂದು ತಿಳಿದು ಬಂದಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಫೆಬ್ರವರಿ 12 ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ದಿನಗಣನೆ; ಕಾರ್ಯಕ್ರಮ ನಿಷೇಧಿಸುವಂತೆ ಕೋರಿ ಅರ್ಜಿ
ಫೆಬ್ರವರಿ 12ರಂದು ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 16ರಂದು ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 75,000 ಕೋಟಿ ರೂ. ವೆಚ್ಚವಾಗಬಹುದು ಎಂದು ನಿರೀಕ್ಷಿಸಲಾಗಿದ್ದು, ಮತ್ತಷ್ಟು ಜನಪ್ರಿಯ ಯೋಜನಗೆಳನ್ನು ಘೋಷಿಸಲಾಗುತ್ತದೆಯೇ ಎಂದು ಕಾದು ನೋಡಬೇಕಿದೆ.
ಏಪ್ರಿಲ್​-ಮೇ ತಿಂಗಳಲ್ಲಿ ಲೋಕಸಭೆ ಚುಣಾವಣೆ ನಡೆಯಲಿದ್ದು, ಮಾರ್ಚ್​ ಮಧ್ಯಂತರ ಅಥವಾ ಕೊನೆಯ ವಾರದಲ್ಲಿ ಚುನಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನವೇ ಬಜೆಟ್​ ಮಂಡಿಸಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
