ಬೆಂಗಳೂರು:ಪರಿಶಿಷ್ಟ ಜಾತಿ, ಪಂಗಡದ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನಗಳ ಹಂಚಿಕೆ ಅನುಪಾತ ಬದಲಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ದಲಿತ ಉದ್ದಿಮೆದಾರರ ಸಂಘದ ನಿಯೋಗದ ಜತೆಗೆ ಶನಿವಾರ ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಿದ್ದಾರೆ.
ಎಸ್​ಸಿ, ಎಸ್​ಟಿ ಉದ್ದಿಮೆದಾರರಿಗೆ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಶೇ.60, ರಾಜ್ಯಮಟ್ಟದ ಸಮಿತಿಯಲ್ಲಿ ಶೇ.40ರಷ್ಟು ಕೈಗಾರಿಕಾ ನಿವೇಶನ ಹಂಚಿಕೆ ಮಾಡಲಾಗುತ್ತಿದೆ. ಆದರೆ ದಲಿತ ಉದ್ದಿಮೆದಾರರಲ್ಲಿ ಬಹುತೇಕರ ಯೋಜನಾವೆಚ್ಚ 15 ಕೋಟಿ ರೂ.ಗಿಂತ ಕಡಿಮೆಯಿರುವ ಕಾರಣ ಜಿಲ್ಲಾ ಹಂತದ ನಿವೇಶನಗಳ ಹಂಚಿಕೆ ಪ್ರಮಾಣ ಹೆಚ್ಚಿಸಬೇಕು ಎಂಬ ನಿಯೋಗದ ಮನವಿಗೆ ಸಿಎಂ ತಕ್ಷಣ ಸ್ಪಂದಿಸಿದರು. ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಶೇ. 70 ಹಾಗೂ ರಾಜ್ಯಮಟ್ಟದ ಸಮಿತಿಯಲ್ಲಿ ಶೇ.30ರಷ್ಟು ನಿವೇಶನಗಳ ಹಂಚಿಕೆಗೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ದಲಿತ ಉದ್ದಿಮೆದಾರರಿಗೆ 2009ರಲ್ಲಿ ನಿಗದಿಪಡಿಸಿದ ಮೀಸಲಿನಂತೆ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿನ ಕೊರತೆ ಭರ್ತಿ ಮಾಡಲು ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಜಂಟಿ ಹೊಣೆಗಾರಿಕೆ:ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಂಟಿಯಾಗಿ ಲ್ಯಾಂಡ್ ಆಡಿಟ್ ಮಾಡಿ ವರದಿ ಸಲ್ಲಿಸಬೇಕು ಎಂದು ಸಿಎಂ ಬೊಮ್ಮಾಯಿ ನಿರ್ದೇಶಿಸಿದರು. ವರದಿ ಸಲ್ಲಿಕೆಯಾದ ನಂತರ ವಸ್ತುಸ್ಥಿತಿ ತಿಳಿಯಲಿದ್ದು, ಕೊರತೆಯಾಗಿರುವ ಭೂಮಿಯನ್ನು ನಿಗದಿತ ಕಾಲಮಿತಿಯೊಳಗೆ ಸರಿದೂಗಿಸಿ, ಎಸ್​ಸಿ ಹಾಗೂ ಎಸ್​ಟಿ ಉದ್ದಿಮೆದಾರರಿಗೆ ತುಂಬಿಕೊಡಬೇಕು ಎಂದು ಸಲಹೆ ನೀಡಿದರು. ಕೆಎಸ್​ಎಫ್​ಸಿಯಲ್ಲಿ ಸಾಲ ಸೌಲಭ್ಯ ಪಡೆಯುವಾಗ ಸಮಾನಾಂತರ ಭದ್ರತೆಗೆ ಕೈಗಾರಿಕಾ ಭೂಮಿಯ ವಾಸ್ತವ ಬೆಲೆಯನ್ನು ಪರಿಗಣಿಸಬೇಕು ಎಂಬ ಬೇಡಿಕೆ ಬಗ್ಗೆ ಆರ್ಥಿಕ ಇಲಾಖೆ ಜತೆಗೆ ರ್ಚಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ದಲಿತ ಉದ್ದಿಮೆದಾರರ ಕೈಗಾರಿಕೆಯಲ್ಲಿ ಕನಿಷ್ಠ 10 ಎಸ್​ಸಿ, ಎಸ್​ಟಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದರೆ, ವೇತನ ಪ್ರೋತ್ಸಾಹಕ ನೀಡಬೇಕೆಂಬ ಸಂಘದ ಮನವಿಗೆ ಮುಂದಿನ ಆಯವ್ಯಯದಲ್ಲಿ ಪರಿಶೀಲಿಸುವ ಭರವಸೆಯನ್ನು ಸಿಎಂ ನೀಡಿದರು.
ನಟಿ ವಿನಯಪ್ರಸಾದ್ ಮನೆಯಲ್ಲಿ ಕಳವು; ಬೆಡ್​ರೂಮ್​ನಲ್ಲಿದ್ದ ನಗದು ಕದ್ದ ಕಳ್ಳರು!

ಇಬ್ಬರ ಜೀವ ತೆಗೆದ ಸೈಡ್ ​ಸ್ಟ್ಯಾಂಡ್​, ಒಬ್ಬನ ಪ್ರಾಣ ಉಳಿಸಿದ ಹೆಲ್ಮೆಟ್​: ಆದ್ರೆ ತಪ್ಪು ಮೂವರದ್ದೂ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − five =
Remember me
