ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಇಂದು ಸರ್ಕಾರ ಆದೇಶ ಜಾರಿ ಮಾಡಿದೆ.
ರಾಜ್ಯ ಸರ್ಕಾರದ “ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಈ ಆದೇಶದ ಮೂಲಕ ನೀಡಲಾಗಿದೆ.
ಇದನ್ನೂ ಓದಿ:‘ಏ ಕುಳಿತ್ಕೋ.. ನಾನೇ ಇನ್ನೂ ಕುಳಿತಿದ್ದೀನಿ’: ತಾವಿನ್ನೂ ಕೂತಿದ್ದಾಗಲೇ ಎಸ್​ಪಿ ಎದ್ದಿದ್ದಕ್ಕೆ ಸಿದ್ದರಾಮಯ್ಯ ಗರಂ!
1. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ (ಎಲ್ಲಾ ಅಂತರ ರಾಜ್ಯ ಸಾರಿಗೆ ಅನುಸೂಚಿಗಳನ್ನು ಹೊರತುಪಡಿಸಿ) ಈ ಯೋಜನೆ ಅನ್ವಯಿಸತಕ್ಕದ್ದು.
2. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್‌ಗಳು) ಬಸ್​ಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
3. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲ ಬಸ್‌ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಶೇ.50 ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.
ಇದನ್ನೂ ಓದಿ:ನಾಡಿದ್ದೇ ‘ರಾಯರು ಮಾವನ ಮನೆಗೆ..’; ಇದು ಕನ್ನಡ ಚಿತ್ರರಂಗದಲ್ಲೇ ಪ್ರಥಮ!
4. ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.
4. “ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು.
ಸಿದ್ದರಾಮಯ್ಯ ಕುರಿತು ಹನಿಗವಿಯ ವರ್ಷದ ಹಿಂದಿನ ತಮಾಷೆ ನಿಜವಾಯಿತು!

ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಆಗಮನ ಸಾಧ್ಯತೆ; ಕರ್ನಾಟಕಕ್ಕೆ ಯಾವಾಗ ಮಾನ್ಸೂನ್ ಪ್ರವೇಶ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − four =
Remember me
