ಬೆಂಗಳೂರು:ರಾಜ್ಯದಲ್ಲಿ ಹೊಸ ಕೈಗಾರಿಕೆ ಸ್ಥಾಪನೆ, ಚಾಲ್ತಿ ಕೈಗಾರಿಕೆಗಳಿಗೆ ಹೆಚ್ಚುವರಿ ಬಂಡವಾಳ ಹೂಡುವ 18 ಯೋಜನೆಗಳ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯ ಉನ್ನತಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ್ಲ 34,432.46 ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ 48850 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.
ಬಿಡದಿ ಬಳಿ ಹೈಬ್ರಿಡ್ ಮಾದರಿ ಪ್ರಯಾಣಿಕರ ಕಾರ್​ಗಳನ್ನು ಸ್ಥಾಪಿಸಲು ಉತ್ಸುಕವಾಗಿರುವ ಟೊಯೋಟಾ ಕಿಲೋಸ್ಕರ್ 3,661.50 ಕೋಟಿ ರೂ. ಹೂಡಿಕೆ ಮಾಡಲಿದ್ದು, 3254 ಜನರಿಗೆ ಉದ್ಯೋಗ ಲಭಿಸಲಿದೆ. ಟೊಯೋಟಾ ಮೋಟರ್ಸ್ ಸೇರಿ ಎಂಟು ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 10 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ.
ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಅಗ್ರಸ್ಥಾನವನ್ನು ಕರ್ನಾಟಕ ಕಾಯ್ದುಕೊಂಡಿದ್ದು, ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆ ಬಳಿಕ 1.10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಹಸಿರು ಇಂಧನ ಸೇರಿ ವಿವಿಧ ಉದ್ಯಮಗಳನ್ನು ನೆಲೆಗೊಳಿಸಲು ಸರ್ಕಾರ ಒಡಂಬಡಿಕೆ ಮಾಡಿಕೊಂಡಿರುವುದನ್ನು ಸ್ಮರಿಸಬಹುದು.
ತ್ವರಿತ ಅನುಷ್ಠಾನಕ್ಕೆ ಒತ್ತು:ರಾಜ್ಯದ ಉದ್ಯಮ-ಹೂಡಿಕೆ ಸ್ನೇಹಿ ನೀತಿಯಂತೆ ಬಂಡವಾಳ ಹೂಡಿಕೆಗೆ ಮುಂದೆ ಬಂದಿರುವ ಎಥೆನಾಲ್, ಏರೋಸ್ಪೇಸ್, ಸೆಮಿಕಂಡಕ್ಟರ್ ತಯಾರಿಕಾ ಯಂತ್ರಗಳು, ಸ್ಟೀಲ್ ಹಾಗೂ ಆಟೋ ಮೊಬೈಲ್ ಉದ್ಯಮಗಳ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಉನ್ನತಮಟ್ಟದ ಸಭೆಯಲ್ಲಿ ಒಪ್ಪಿಗೆ ಪಡೆದ ಪ್ರಸ್ತಾವನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು ನೀಡಿದ್ದು, ಈ ಕ್ರಮದಿಂದ ಹೆಚ್ಚಿನ ಹೂಡಿಕೆ, ಉದ್ಯಮಗಳ ಆಕರ್ಷಣೆ ಸಾಧ್ಯವಾಗಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ಬೆಂಗಳೂರು:ಕೋವಿಡ್ ಸಂದರ್ಭದಲ್ಲಿ ಶ್ರಮಿಕರು ಮತ್ತವರ ಕುಟುಂಬ ವರ್ಗದವರು ವೈದ್ಯರನ್ನು ತಲುಪಲಾಗದೆ ಪರದಾಡಿದ ಸಂದರ್ಭ ಮರುಕಳಿಸದಂತೆ ತಡೆಯುವ ಸಲುವಾಗಿ ರಾಜ್ಯ ಕಾರ್ವಿುಕ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ಶುಕ್ರವಾರ ಕಾರ್ವಿುಕ ಸಚಿವ ಶಿವರಾಂ ಹೆಬ್ಬಾರ್ ಅವರು, ಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸನ್ ಸೇವೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ರೈಲ್​ಟೆಲ್ ಕಾಪೋರೇಷನ್ ಆಫ್ ಇಂಡಿಯಾ ಜತೆ ಒಡಂಬಡಿಗೆ ಸಹಿ ಹಾಕಿದರು.
ಈ ಯೋಜನೆ ಪ್ರಾಯೋಗಿಕವಾಗಿ ಬೆಂಗಳೂರಿನ ಇಂದಿರಾನಗರ ಕಾರ್ವಿುಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯ ಎಂಟು ಚಿಕಿತ್ಸಾಲಯಗಳು ಮತ್ತು ಹುಬ್ಬಳ್ಳಿ ಕಾರ್ವಿುಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಐದು ಕಾರ್ವಿುಕ ರಾಜ್ಯ ವಿಮಾ ಚಿಕಿತ್ಸಾಲಯಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದರು. ಈ ಯೋಜನೆಯಡಿ ರೋಗಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹತ್ತಿರದ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ತರಬೇತಿ ಪಡೆದ ಸಿಬ್ಬಂದಿಯ ಸಹಾಯದಿಂದ ಕೇಂದ್ರ ಸ್ಥಾನದಲ್ಲಿನ ನುರಿತ ತಜ್ಞ ವೈದ್ಯರನ್ನು ಸಂರ್ಪಸಿ ಸೂಕ್ತ ಸಲಹೆ, ಚಿಕಿತ್ಸೆ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದರು. ಕಾರ್ವಿುಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮನೋಜ್ ಜೈನ್, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ, ರೈಲ್ ಟೆಲ್ ಅಧಿಕಾರಿಗಳು, ಇಎಸ್​ಐ ನಿರ್ದೇಶನಾಲಯದ ಡಾ. ನಾರಾಯಣ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
2020ರ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಹೆಲ್ತ್ ಯೋಜನೆ ಅನುಷ್ಠಾನದ ಇಂಗಿತ ವ್ಯಕ್ತಪಡಿಸಿದ್ದರು. ಮೋದಿ ಆಶಯದಂತೆ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಇಲಾಖೆ ಮುಂದಾಗಿದೆ. ಶ್ರಮಿಕ ವರ್ಗದ ಆರೋಗ್ಯ ಕಾಳಜಿ ನಮ್ಮ ಸರ್ಕಾರದ ಆದ್ಯತೆ. ಹೀಗಾಗಿ ಡಿಜಿಟಲ್ ಹೆಲ್ತ್ ಯೋಜನೆ ಜಾರಿಗೆ ಮುಂದಾಗಿದ್ದೇವೆ.
|ಶಿವರಾಂ ಹೆಬ್ಬಾರ್ಕಾರ್ವಿುಕ ಸಚಿವ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 11 =
Remember me
