ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿರುವ ಎಲ್ಲ ಆಸ್ತಿಗಳನ್ನು ಸರ್ಕಾರ ಪುನಃ ಸಂಗ್ರಹಿಸಲಿದ್ದು, ಅವುಗಳನ್ನು ಸ್ಕ್ಯಾನ್ ಮಾಡಿ ಕೂಡ ಇರಿಸಿಕೊಳ್ಳಲಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರ್ಯಾಂಡ್ ಬೆಂಗಳೂರು ಕಲ್ಪನೆ ಹೊಂದಿರುವ ಡಿ.ಕೆ.ಶಿವಕುಮಾರ್ ಇಂದು ಆ ಕುರಿತಂತೆ ಸಭೆ ನಡೆಸಿದ್ದು, ಬಳಿಕ ಸಭೆಯ ಸಾರಾಂಶ ತಿಳಿಸಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಹಂಚಿಕೊಂಡರು.
ಬ್ರಾಂಡ್ ಬೆಂಗಳೂರು ಸಂಬಂಧ ಈ ಹಿಂದೆ ಶಾಸಕರು, ಸಂಸದರು, ಐಟಿ-ಬಿಟಿ ಪ್ರಮುಖರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಇಂದು ಬೆಂಗಳೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಮತ್ತು ನಾಗರಿಕ ಸಂಘಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ್ದೇನೆ ಎಂದರು.
ಇದನ್ನೂ ಓದಿ:ನನ್ನ ಪ್ಲ್ಯಾನ್ ಏನಿದೆ ಅದನ್ನು 100 ದಿನಗಳೊಳಗೆ ಹೇಳುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಜನರಿಗೆ ದುಬಾರಿ ತೆರಿಗೆ ಹಾಕುವ ಯೋಚನೆ ಇಲ್ಲ. ಆದರೆ ಯಾರು ತೆರಿಗೆ ಕಟ್ಟುತ್ತಿಲ್ಲ, ಅವರಿಂದ ಕಾನೂನು ಪ್ರಕಾರ ತೆರಿಗೆ ಸಂಗ್ರಹಿಸುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿರುವ ಎಲ್ಲ ಆಸ್ತಿಗಳ ದಾಖಲೆಗಳನ್ನ ಸಂಗ್ರಹಿಸಿ, ಸ್ಕ್ಯಾನ್ ಮಾಡುತ್ತೇವೆ ಎಂದೂ ಅವರು ಹೇಳಿದರು.
ಇದನ್ನೂ ಓದಿ:ನೇರಳೆ ಹಣ್ಣುಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?: ಆರೋಗ್ಯಕ್ಕೇನು ತೊಂದರೆ?
ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಬಳಿಕ ಜನರ ಮನೆ ಬಾಗಿಲಿಗೆ ಅದನ್ನು ತಲುಪಿಸುವ ಕೆಲಸ ಮಾಡುತ್ತೇನೆ. ಇದಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ. ದಾಖಲೆಗಳನ್ನು ಯಾರೂ ತಿದ್ದಬಾರದು ಎಂಬ ಉದ್ದೇಶದಿಂದ ನಾವು ಈ ಯೋಜನೆ ಕೈಗೊಳ್ಳಲು ನಿರ್ಧರಿಸಿದ್ದೇವೆ. ಬಿಡಿಎ ಹಾಗೂ ಬಿಬಿಎಂಪಿ ಆಸ್ತಿ ದಾಖಲೆಗಳು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವುದು ನನ್ನ ಉದ್ದೇಶ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − thirteen =
Remember me
