ಬೆಂಗಳೂರು:ಕಳೆದ ಕೆಲವು ಕಾಲದಿಂದ ಸುದ್ದಿಯಲ್ಲಿರುವ ಎರಡು ಪ್ರಮುಖ ಸಹಕಾರ ಬ್ಯಾಂಕ್​ಗಳ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಳ್ಳುವ ಲಕ್ಷಣಗಳು ಗೋಚರಿಸಿವೆ. ಇಂದು ವಿಕಾಸಸೌಧದಲ್ಲಿ ನಡೆದ ಮಹತ್ವದ ಸಭೆಯೊಂದರಲ್ಲಿ ಈ ಕುರಿತು ನಿರ್ಧಾರ ತಳೆಯಲಾಗಿದೆ.
ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ಅವ್ಯವಹಾರಗಳ ಕುರಿತು ಇಂದು ಸಹಕಾರ ಸಚಿವ ಎಸ್​.ಟಿ. ಸೋಮಶೇಖರ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಪರಾಮರ್ಶೆ ಸಭೆ ನಡೆದಿದೆ. ಈ ಸಭೆಯಲ್ಲಿ ಹಲವಾರು ವಿಚಾರಗಳನ್ನು ಚರ್ಚಿಸಿ ಕೆಲವು ನಿರ್ಧಾರ ಕೈಗೊಳ್ಳಲಾಗಿದೆ.
ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್​, ವಶಿಷ್ಠ ಸೌಹಾರ್ದ ಬ್ಯಾಂಕ್ ಮಾತ್ರವಲ್ಲದೆ ಇತರೆ ಯಾವುದೇ ಬ್ಯಾಂಕ್​ಗಳಲ್ಲಿ ಅವ್ಯವಹಾರಗಳು ನಡೆದಿದ್ದರೆ ಆ ಪ್ರಕರಣಗಳನ್ನು ಸಹ ಸಿಬಿಐ ತನಿಖೆಗೆ ವಹಿಸಲು ಸರ್ಕಾರ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಮ್​ನಲ್ಲಿ ಮಾತಾಡ್ತ ಮಾತಾಡ್ತ ಕುಸಿದು ಬಿದ್ದು ಸಾವಿಗೀಡಾದ ಬಾಡಿಬಿಲ್ಡರ್!

ನಿಶ್ಚಿತಾರ್ಥವಾಗಿದ್ದರೂ ಮನೆಬಿಟ್ಟು ಹೋಗಿ ಪ್ರಿಯಕರನನ್ನೇ ವರಿಸಿದಳು; ಸಹೋದರರಿಬ್ಬರು ಆಕೆಯ ಪತಿಯನ್ನೇ ಕೊಂದರು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 + 6 =
Remember me
