ಬೆಳಗಾವಿ:ರಮೇಶ್​ ಜಾರಕಿಹೊಳಿ ಅವರ ತವರಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನಾಕಾರರು ಸುಮಾರು 10 ಬಸ್​ಗಳಿಗೆ ಕಲ್ಲು ತೂರಿದ್ದಾರೆ.
ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಹುಕರ್​ನ ಸ್ವಕ್ಷೇತ್ರ ಗೋಕಾಕ್​ನಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅಯ್ಯೋಯ್ಯೋ ಅನ್ಯಾಯ… ಎಂದು ಕೂಗಾಡುತ್ತ ಬಸವೇಶ್ವರ ವೃತ್ತದಲ್ಲಿ ಹೈಡ್ರಾಮ ಮಾಡಿದ​ ಜಾರಕಿಹೊಳಿ ಬೆಂಬಲಿಗರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಗೋಕಾಕ್​ ನಗರ ಬಂದ್​ಗೆ ಆಗ್ರಹಿಸಿ ಅಂಗಡಿಗಳನ್ನ ಮುಚ್ಚಿಸಿದ್ದರು. ಅಲ್ಲದೆ, ಬಂದ್​ಗೆ ಕರೆ ನೀಡಿದ್ದ ಅವರು, ಕಂಡ ಕಂಡ ಬಸ್​ಗೆ ಕಲ್ಲೂ ತೂರಿದ್ದಾರೆ.ಇದನ್ನೂ ಓದಿರಿಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ, ಎಲ್ಲರೂ ಹಾಲಿಗಳೇ…
ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿತ್ತು. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು. ಹಲವೆಡೆ ಕಾಂಗ್ರೆಸ್​-ಜೆಡಿಎಸ್​ ಕಾರ್ಯಕರ್ತರು ಪ್ರತ್ಯೇಕವಾಗಿ ಬೀದಿಗಿಳಿದು ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಸಚಿವ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇತ್ತ ನಾನು ಯಾವ ತಪ್ಪನ್ನೂ ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದು ಜಾರಕಿಹೊಳಿ ಹೇಳಿದ್ದರು. ಈ ಎಲ್ಲ ಬೆಳವಣಿಗೆ ನಡುವೆ ರಾಜೀನಾಮೆ ಪಡೆಯಬೇಕೆಂದು ಸಿಎಂ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್​ ಸೂಚಿಸಿತ್ತು. ಇದರ ಬೆನ್ನಲ್ಲೇ ರಮೇಶ್​ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಮೇಶ್​ ಜಾರಕಿಹೊಳಿ ಅವರದ್ದು ತಪ್ಪಿಲ್ಲ, ಯಾರೋ ದುರುದ್ದೇಶದಿಂದ ಇಂತಹ ವಿಡಿಯೋ ಸೃಷ್ಟಿಸಿದ್ದಾರೆ. ಜಾರಕಿಹೊಳಿಯ ರಾಜೀನಾಮೆಯನ್ನ ಸಿಎಂ ಅಂಗೀಕರಿಸಬಾರದು ಎಂದು ಆಗ್ರಹಿಸುತ್ತಿರುವ ಜಾರಕಿಹೊಳಿ ಬೆಂಬಲಿಗರು ಬೀದಿಗಿಳಿದು ಹೋರಾಡುತ್ತಿದ್ದಾರೆ.ಗೋಕಾಕ ತಾಲೂಕಿನ ಪಾಲ್ಸ್​ನಲ್ಲಿರುವ ಗೋಕಾಕ ಹತ್ತಿ ಗಿರಣಿಯ ಸಾವಿರಾರು ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಏಕಾಏಕಿ ಪ್ರತಿಭಟನೆಗೆ ಕುಳಿತರು. ರಮೇಶ್ ಜಾರಕಿಹೊಳಿ ವಿರುದ್ಧ ರಾಜಕೀಯ ಷಡ್ಯಂತರ ನಡೆದಿದೆ ಎಂದು ಆರೋಪಿಸಿದರು.
ರಮೇಶ್ ಜಾರಕಿಹೊಳಿ ಬೆಂಬಲಿಸಿ ನಡೆಯುತ್ತಿದ್ದ ವೇಳೆ ಗೋಕಾಕ್​ ಬಸ್ ನಿಲ್ದಾಣದಲ್ಲಿ ನಿಂತಿದ್ದ 2 ಸರ್ಕಾರಿ ಬಸ್​ ಸೇರಿದಂತೆ 10 ಬಸ್​ಗಳಿಗೆ ಕಲ್ಲು ತೂರಿದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಿಡಗೇಡಿಗಳ ಪುಂಡಾಟಕ್ಕೆ ಸಾರಿಗೆ ವಾಹನಗಳು ಜಖಂಗೊಂಡಿವೆ.ಪ್ರತಿಭಟನೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ರಸ್ತೆಯಲ್ಲೇ ನಿಂತು ಹೈರಾಣಾಗಿದ್ದರು. ಮನೆಗೆ ಹೋಗಲಾಗದೆ ಬಿಸಿಲಲ್ಲಿ ನಿಂತಿದ್ದ ವಿದ್ಯಾರ್ಥಿಗಳನ್ನು ಗೋಕಾಕ್​ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಅವರು ಸ್ವಂತ ಖರ್ಚಿನಲ್ಲಿ ಮ್ಯಾಕ್ಸಿ ಕ್ಯಾಬ್ ವ್ಯವಸ್ಥೆ ಮಾಡಿ ಕಳುಹಿಸಿಕೊಟ್ಟರು.
ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ, ಎಲ್ಲರೂ ಹಾಲಿಗಳೇ…

ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್​ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?

ಸೆಕ್ಸ್​ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಜಾರಕಿಹೊಳಿ, ಷರತ್ತುಗಳು ಅನ್ವಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
