ಬೆಳಗಾವಿ:ಸಾಮಾನ್ಯವಾಗಿ ಗರಿಷ್ಠ ಭದ್ರತೆ ಇರುವ ಮುಖ್ಯಮಂತ್ರಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲೇ ಕಳ್ಳರು ಕೈಚಳಕ ತೋರಿದ ಪ್ರಕರಣವೊಂದು ನಡೆದಿದೆ. ಅದರಲ್ಲೂ ರಾಜಕಾರಣಿಯೊಬ್ಬರೇ ಚಿನ್ನ ಕಳೆದುಕೊಂಡಂಥ ಪ್ರಕರಣ ಇದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಈ ಕಾರ್ಯಕ್ರಮದಲ್ಲೇ ಹಾಜರಿದ್ದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆಯ ಸರಕ್ಕೇ ಕಳ್ಳರು ಕೈ ಹಾಕಿದ್ದರು. ರಾಮದುರ್ಗ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶಾಂತಾಬಾಯಿ ಬೊಮ್ಮಣ್ಣವರ ಸರ ಕಳೆದುಕೊಂಡವರು.
ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಇಂದು ಈ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಶಾಂತಾಬಾಯಿ ಕೂಡ ಪಾಲ್ಗೊಂಡಿದ್ದು, ಕಾರ್ಯಕ್ರಮದ ಬಳಿಕ ಸಿಎಂ ಬೊಮ್ಮಾಯಿ ಮರಳುವಾಗ ಉಂಟಾದ ಗದ್ದಲದಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಪರಿಣಾಮವಾಗಿ, ಶಾಂತಾಬಾಯಿ ಅವರು 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನಕ್ಕೆ ಒಳಗಾಗಿದೆ.
ನಿಮ್ಮ ದಾಖಲೆಗಳನ್ನು ನೀಡಿ ಬೇರೆ ಯಾರೋ ಸಿಮ್​ ಪಡೆದಿರಬಹುದು!; ಚೆಕ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 5 =
Remember me
