ಮಂಡ್ಯ:ಕಳ್ಳರು ರಾತ್ರಿ ವೇಳೆ ಅಥವಾ ಮನೆಯವರು ಎಲ್ಲಾದರೂ ದೂರ ಹೋಗಿದ್ದ ಸಂದರ್ಭದಲ್ಲಿ ಕಳ್ಳತನ ಮಾಡುವುದು ಸರ್ವೇಸಾಮಾನ್ಯ. ಆದರೆ ಇಲ್ಲಿ ಸಂಜೆ ಸ್ನೇಹಿತರ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಗೆ ನುಗಿದ್ದ ಕಳ್ಳರು, ಒಂದು ಕೆ.ಜಿ. ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಇಂದು ಈ ಕಳವು ನಡೆದಿದೆ. ಇಲ್ಲಿನ ಲೋಲಾಕ್ಷಿ ಎಂಬವರು ಸಂಜೆ ವೇಳೆ ಸ್ನೇಹಿತರ ಮನೆಗೆಂದು ಹೋಗಿದ್ದರು. ಆದರೆ ಅಲ್ಲಿಂದ ಅವರು ವಾಪಸ್ ಬರುವಷ್ಟರಲ್ಲಿ ಕಳ್ಳರು ಬೀಗ ಒಡೆದು ಮನೆಗೆ ಹೊಕ್ಕಿದ್ದರು. ಮಾತ್ರವಲ್ಲ, ಬೀರುವಿನಲ್ಲಿದ್ದ ಒಡವೆಗಳನ್ನೂ ದೋಚಿಕೊಂಡು ಹೋಗಿದ್ದರು.
ಸ್ನೇಹಿತರ ಮನೆಯಿಂದ ಮರಳಿದಾಗ ಕಳವು ನಡೆದಿರುವುದು ಗೊತ್ತಾಗಿದ್ದು, ಸ್ಥಳಕ್ಕೆ ಮದ್ದೂರು ಟೌನ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಜತೆಗೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರ ತಂಡವೂ ಬಂದಿದ್ದು, ಪರಿಶೀಲನೆ ನಡೆಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
8 ತಿಂಗಳ ಗರ್ಭಿಣಿಗೆ 1 ವಾರವೂ ಸಮಯ ಕೊಡದೆ ಕೆಲಸದಿಂದ ಕಿತ್ತು ಹಾಕಿದ ಗೂಗಲ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
