ಬೆಂಗಳೂರು:ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಚಿನ್ನದ ಮೇಲೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಹಬ್ಬ-ಹರಿದಿನಗಳ ಸಾಲು ಬಂದರೆ ಚಿನ್ನಾಭರಣಗಳನ್ನು ಖರೀದಿ ಹೆಚ್ಚುತ್ತದೆ. ಆದರೆ ಚಿನ್ನದ ಬೆಲೆ ಒಂದು ದಿನವಿದ್ದಂತೆ ಮತ್ತೊಂದು ದಿನ ಇರುವುದಿಲ್ಲ. ದೇಶಾದ್ಯಂತ ಬೆಲೆ ವ್ಯತ್ಯಾಸವಾಗುತ್ತಿರುತ್ತದೆ. ದೈನಂದಿನ ದರದಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಸಹಜ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,350 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58.200 ರೂ.ಬೆಳ್ಳಿ ಬೆಲೆ 1 ಕೆಜಿ: 69,000 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 53,150 ರೂಪಾಯಿ ಇತ್ತು. ಆದರೆ ಇಂದು 53,350 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 57.980 ರೂಪಾಯಿ ಇತ್ತು. ಆದರೆ ಇಂದು 58.200 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 53,350 ರೂ.ಮುಂಬೈ: 53,350 ರೂ.ದೆಹಲಿ: 53,500 ರೂ.ಕೇರಳ: 53,350 ರೂ.
ಜಾಗತಿಕ ಮಟ್ಟದ ಆರ್ಥಿಕತೆ, ಹಣದುಬ್ಬರದ ಅನಿಶ್ಚಿತತೆ, ನಿರುದ್ಯೋಗ, ಬಡ್ಡಿ ದರ ಏರಿಕೆ, ಡಾಲರ್ ಎದುರು ರುಪಾಯಿ ಕುಸಿತ ಮತ್ತು ಬ್ಯಾಂಕಿಂಗ್ ಬಿಕ್ಕಟ್ಟು ಎಲ್ಲವೂ ಪ್ರಭಾವ ಬೀರುತ್ತಿದೆ. ಗಣೇಶ ಹಬ್ಬದ ಬಳಿಕ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಈ ವಾರ ಚಿನ್ನ ದಿನೇ ದಿನೇ ದುಬಾರಿಯಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 12 =
Remember me
