ಬೆಂಗಳೂರು : ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ 35 ಎಕರೆ ಗೋಮಾಳ ಜಮೀನು ಅನಧಿಕೃತವಾಗಿ ಒತ್ತುವರಿ ಮಾಡಲಾಗಿದ್ದನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣ ಸಂಬಂಧ ದೊಡ್ದಬಳ್ಳಾಪುರ ನಿವಾಸಿ ರಾಮು ನೇರಳಗಟ್ಟ ಮತ್ತು ಎಚ್.ಕಾಂತರಾಜು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್ ಕೃಷ್ಣ ಕುಮಾರ್ ಹಾಗೂ ಡಿ. ರಾಮಚಂದ್ರ ಹುದ್ದಾರ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ಮಜರಾ ಹೊಸಹಳ್ಳಿ ಗ್ರಾಮದಲ್ಲಿ ಸರ್ವೇ ನಂ. 57ರಲ್ಲಿನ 6 ಎಕರೆ 12 ಗುಂಟೆ, ಸರ್ವೇ ನಂ.58ರಲ್ಲಿನ 28 ಎಕರೆ 10 ಗುಂಟೆ ಮತ್ತು ಸರ್ವೇ ನಂ.60ರಲ್ಲಿನ ಗುಂಟೆ ಜಾಗವು ಸರ್ಕಾರಿ ಗೋಮಾಳ ಜಮೀನು ಆಗಿದೆ. ಈ ಜಮೀನನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಜಾಗದ ಸುತ್ತಲೂ ತಡೆಗೋಡೆ ನಿರ್ಮಿಸಲಾಗಿದೆ ಕೂಲಿ ಕಾರ್ಮಿಕರನ್ನು ಬಿಟ್ಟು ಕೆಲಸ ಮಾಡಿಸುತ್ತಿದ್ದಾರೆ.
ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ಸೇರಬೇಕಾದ 35 ಎಕರೆ ಜಮೀನನ್ನು ಭೂಗಳ್ಳರಿಂದ ರಕ್ಷಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠದ ಮುಂದೆ ಮನವಿ ಮಾಡಿದರು.
ಕೆಲಕಾಲ ಅರ್ಜಿ ಆಲಿಸಿದ ನ್ಯಾಯಪೀಠ , ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಂತರ ಜಿಲ್ಲಾಧಿಕಾರಿ, ದೊಡ್ಡಬಳ್ಳಾಪುರ ಪಟ್ಟಣದ ಉಪ ವಿಭಾಗಾಧಿಕಾರಿ, ದೊಡ್ಡಬಳ್ಳಾಪುರ ತಾಲೂಕು ತಹಸೀಲ್ದಾರ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿದೆ.
ಕ್ರಮ ಕೈಗೊಳ್ಳದ ಅಧಿಕಾರಿಗಳು….ಪ್ರಕರಣ ಸಂಬಂಧ ಕಾನೂನು ಬಾಹಿರವಾಗಿ ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಅರ್ಜಿದಾರರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕ್ಷ್ಯಧಾರಗಳ ಸಮೇತ ದೂರು ನೀಡಿದ್ದು ಒತ್ತುವರಿ ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ, ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eighteen − two =
Remember me
