ಬೆಂಗಳೂರು:ರಾಜ್ಯದಲ್ಲಿರುವ ತಿರುಪತಿಯ ತಿಮ್ಮಪ್ಪನ ಭಕ್ತರಿಗೊಂದು ಶುಭ ಸುದ್ದಿ ಇದೆ.ತಿರುಮಲದಲ್ಲಿರುವ ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದ್ದು, ಬಳಿಕ ಭಕ್ತರ ಬಳಕೆಗೆ ಸಿಗಲಿದೆ.
ಬುಧವಾರ ತಿರುಮಲಕ್ಕೆ ಭೇಟಿ ನೀಡಿದ್ದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ ಹಾಗೂ ಆಯುಕ್ತರಾದ ಬಸವರಾಜೇಂದ್ರ ಅವರು ಕರ್ನಾಟಕದ ಯಾತ್ರಿಗಳಿಗೆ ನಿರ್ಮಿಸುತ್ತಿರುವ ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿಯನ್ನು ಪರಿಶೀಲಿಸಿದರು.ಇದೇ ವೇಳೆ ತಿರುಮಲದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಲಾಯಿತು ಈ ಸಂದರ್ಭದಲ್ಲಿ ಟಿಟಿಡಿಯ ಅಧಿಕಾರಿ ಧರ್ಮೇಂದ್ರ ರೆಡ್ಡಿ ಪಾಲ್ಗೊಂಡಿದ್ದರು.
220 ಕೋಟಿ ರೂ. ವೆಚ್ಚದಲ್ಲಿ ವಸತಿಗೃಹ, ಕಲ್ಯಾಣ ಮಂಟಪ ಸಿದ್ಧವಾಗುತ್ತಿದೆ. ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ 384 ಕೊಠಡಿಯ ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿ ಪೂರ್ಣವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.ಆದಷ್ಟು ಶೀಘ್ರವಾಗಿ ಮತ್ತು ಅಚ್ಚುಕಟ್ಟಾಗಿ ಕೆಲಸ ಮುಗಿಸುವಂತೆ ಸಚಿವ ರಾಮಲಿಂಗ ರೆಡ್ಡಿ ಸೂಚಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × three =
Remember me
