ಬೆಂಗಳೂರು:ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ.ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಇದನ್ನೂ ಓದಿ:ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್​​ಗೆ ಹೆಚ್ಚಿನ ಒತ್ತು: ಶೀತಲ ಘಟಕಗಳ ನಿರ್ಮಾಣಅದೇ ರೀತಿ ಶೇ. 3ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಜತೆಗೆ ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂ. ವರೆಗಿನ ಸಾಲಕ್ಕೆ ರಾಜ್ಯ ಸರ್ಕಾರವು ಶೇ. 7 ರಷ್ಟು ಬಡ್ಡಿ ಸಹಾಯಧನ ನೀಡಲಿದೆ ಎಂದಿದ್ದಾರೆ.ಇದನ್ನೂ ಓದಿ:ಮೀನುಗಾರರಿಗೆ ಭರಪೂರ ಪ್ರೋತ್ಸಾಹ: ಡೀಸೆಲ್ ಪ್ರಮಾಣ ಹೆಚ್ಚಳ, ಬಡ್ಡಿರಹಿತ ಸಾಲದ ಮಿತಿ ಹೆಚ್ಚಳಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್‌ ವ್ಯಾನ್‌ (Pick-up Van) ಖರೀದಿಸಲು ಏಳು ಲಕ್ಷ ರೂ. ವರೆಗಿನ ಸಾಲವನ್ನು ಶೇ. ೪ರ ಬಡ್ಡಿ ದರದಲ್ಲಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಶೀಘ್ರ ಹಾಳಾಗುವ ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರು ಒತ್ತಡದ ಮಾರಾಟ ಮಾಡುವುದನ್ನು ತಪ್ಪಿಸಿ, ನ್ಯಾಯಯುತ ಬೆಲೆ ಒದಗಿಸುವುದಕ್ಕೆ ನೆರವಾಗಲು ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ KAPPEC ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಬಜೆಟ್​​ ವೇಳೆ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 1 =
Remember me
