ಬೆಂಗಳೂರು:ರಾಜ್ಯ ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ರೂಪುರೇಷೆ ಸಿದ್ಧಪಡಿಸಲು ಸುವರ್ಣ ಆರೋಗ್ಯ ಟ್ರಸ್ಟ್​ಗೆ ಸರ್ಕಾರ ಆದೇಶಿಸಿದೆ. 2021-22ನೇ ಸಾಲಿನ ಬಜೆಟ್​ನಲ್ಲಿ ಈ ಯೋಜನೆ ಘೊಷಿಸಲಾಗಿತ್ತು. ಇದರಡಿ ಹೃದ್ರೋಗ, ಕ್ಯಾನ್ಸರ್, ನ್ಯೂರೋ ಸರ್ಜರಿ, ಸುಟ್ಟ ಗಾಯ, ಗಂಭೀರ ಗಾಯಗಳು, ಪೀಡಿಯಾಟ್ರಿಕ್, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ ಸೇರಿ 7 ಮಾರಣಾಂತಿಕ ಕಾಯಿಲೆಗಳನ್ನು ಗುರುತಿಸಲಾಗಿದೆ. ಈ ಕಾಯಿಲೆಗಳಿಗೆ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಜ್ಯೋತಿ ಸಂಜೀವಿನಿ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಈ ನೂತನ ಯೋಜನೆ ಅನುಷ್ಠಾನಗೊಳಿಸುವ ಪೂರ್ವದಲ್ಲಿ ಈ ಯೋಜನೆಯ ಕಾರ್ಯ ಸ್ವರೂಪ, ಯೋಜನಾ ವೆಚ್ಚ, ಆಯವ್ಯಯ, ವೈದ್ಯಕೀಯ ಚಿಕಿತ್ಸಾ ವಿಧಾನ, ಚಿಕಿತ್ಸಾ ದರಗಳು, ಫಲಾನುಭವಿಗಳು, ಖಾಸಗಿ ವೈದ್ಯಕೀಯ ಆಸ್ಪತ್ರೆಗಳು, ಅವುಗಳೊಂದಿಗೆ ಮಾಡಿಕೊಳ್ಳಬೇಕಾದ ಒಡಂಬಡಿಕೆ, ಯೋಜನೆಗೆ ಅಗತ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಮತ್ತಿತರ ಅಂಶಗಳ ಬಗ್ಗೆ ವಿಸõತ ಯೋಜನಾ ವರದಿ ಸಿದ್ಧಪಡಿಸುವುದು ಅತ್ಯಗತ್ಯವೆಂದು ಸರ್ಕಾರ ಹೇಳಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಯೋಜನಾ ವರದಿಯನ್ನು 2 ತಿಂಗಳ ಒಳಗಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.
ಹೊಟ್ಟೆನೋವಿಗೆ ಪ್ರಾಣಬಲಿ; ಬೇನೆ ತಾಳಲಾಗದೆ ನೇಣಿಗೆ ಶರಣಾದ ವ್ಯಕ್ತಿ

ವ್ಯಾಪಾರಿಯ ಸೋಗಲ್ಲಿ ಬಂದರು, ಅಂಗಡಿ ಮಾಲೀಕನನ್ನೇ ಕೊಂದರು; ಗುಂಡಿಕ್ಕಿ ಸಾಯಿಸಿದ್ರು ಸುಪಾರಿ ಕಿಲ್ಲರ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
