ಬೆಂಗಳೂರು : ಕರೊನಾದಿಂದ ಕಂಗೆಟ್ಟಿದ್ದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಶುಭ ಸುದ್ದಿ ನೀಡಿದೆ. ಕಳೆದ ವಾರವಷ್ಟೇ ಐದು ತಿಂಗಳ ಬಾಕಿ ವೇತನ ಪಾವತಿ ಮಾಡಿದ್ದ ಸರ್ಕಾರ ಇದೀಗ, ಅವರ ಸೇವೆ ವರ್ಷದ ಮಟ್ಟಿಗೆ ಮುಂದುವರಿಸಿ ಆದೇಶಿಸಿದೆ.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ಸೋಮವಾರ ಆದೇಶ ಹೊರಡಿಸಿದೆ.
ಕೋವಿಡ್-19 ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯವಾಗಿದ್ದು, ಹೀಗಾಗಿ ಅವರನ್ನು ಇನ್ನೊಂದು ಅವಧಿಗೆ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದು, ಕರೊನಾ ಲಾಕ್‌ಡೌನ್‌ನಿಂದಾಗಿ ಅವರೆಲ್ಲ ಜೀವನ ನಡೆಸುವುದೇ ಕಷ್ಟವಾಗಿ ಪರದಾಡಿದ್ದರು. ವೇತನವೂ ಇಲ್ಲದೇ, ಭವಿಷ್ಯವೂ ಮಸುಕಾಗಿತ್ತು. ಕೆಲವು ತರಕಾರಿಯನ್ನೂ ಮಾರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
