ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿರುವ ವಲಸೆ ಕಾರ್ಮಿಕರಿಗೆ ಒಂದು ಗುಡ್​ ನ್ಯೂಸ್​. ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಇನ್ನೂ ಎರಡು ದಿನಗಳಿಗೆ ರಾಜ್ಯ ಸರ್ಕಾರ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 02 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಘೋಷಿಸಿದ ಪ್ರಕಾರ ಈ ಸೌಲಭ್ಯ ಮಂಗಳವಾರ (ನಾಳೆ) ಕೊನೆಗೊಳುವುದಿತ್ತು. ಆದರೆ, ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಪ್ರಯಾಣದ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಎಂದು ಮುಖ್ಯಮಂತ್ರಿ ಬಿಎಸ್​ವೈ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲೇ ಇದ್ರೆ ನಮಗೆ ಸಾವೇ ಗತಿ!: ಹಸಿವಿನಿಂದ ಬಸವಳಿದ ಕಾರ್ವಿುಕರ ನುಡಿ
ಬೆಂಗಳೂರಿನಿಂದ ಭಾನುವಾರ (ಮೇ3) 951 ಕೆಎಸ್​ಆರ್​ಟಿಸಿ ಬಸ್​ಗಳನ್ನು ಒದಗಿಸಲಾಗಿತ್ತು. ಅವುಗಳ ಮೂಲಕ ಅಂದಾಜು 30,000 ಜನ ತಮ್ಮ ಊರುಗಳಿಗೆ ಮರಳಿದ್ದಾರೆ. ಇವತ್ತು ಈಗಾಗಲೇ 50 ಬಸ್ ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ. ಶನಿವಾರದಂದು ಕೂಡ 550 ಬಸ್​​ಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ.
ಇದನ್ನೂ ಓದಿ:ಊರಿಗೆ ತೆರಳಿದರೆ ಜೀವ ಉಳಿದಷ್ಟು ಊಟ ಸಿಗುತ್ತದೆ; ಹಸಿವಿನಿಂದ ಬಸವಳಿದ ಕಾರ್ವಿುಕರ ನುಡಿ
ಎರಡು ರೈಲುಗಳು ಬಿಹಾರದ ಪಟನಾ, ಒಂದು ಜಾರ್ಖಂಡ್​ನ ರಾಂಚಿಗೆ ಭಾನುವಾರ ತೆರಳಿವೆ. ಇದೇ ಸಮಯ ಒಡಿಶಾದ ಭುವನೇಶ್ವರಕ್ಕೆ ಒಂದು ರೈಲು ಸೇರಿ ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ. ಸೋಮವಾರ (ಇಂದು) ಎರಡು ರೈಲುಗಳು ರಾಜಸ್ಥಾನದ ಜೈಪುರ್ ಮತ್ತು ಬಿಹಾರದ ಪಟನಾಕ್ಕೆ ಹೊರಟಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಾರ್ವಿುಕರ ವಿಚಾರದಲ್ಲೂ ರಾಜಕೀಯ, ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ಸಮಸ್ಯೆ ಆಲಿಸಿದ ನಾಯಕರು

ಮದ್ಯದ ಮತ್ತು ಅಳತೆ ಮೀರಿ ಕುಡಿದರೆ ಆಪತ್ತು: ಎಣ್ಣೆ ಸಿಕ್ಕ ಖುಷಿಗೆ ನಿಯಂತ್ರಣ ಮೀರದಿರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nineteen =
Remember me
