ಬೆಂಗಳೂರು:ಸಬ್ ಇನ್​ಸ್ಪೆಕ್ಟರ್ ಹುದ್ದೆ ಆಕಾಂಕ್ಷಿಗಳ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಪಿಎಸ್​ಐ ಹುದ್ದೆ ನೇಮಕಾತಿಗೆ ನಿಗದಿ ಪಡಿಸಲಾಗಿರುವ ಗರಿಷ್ಠ ವಯೋಮಿತಿಯನ್ನು 2 ವರ್ಷ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯ ಪೊಲೀಸ್ ನಿಯಮಗಳು 2003ಕ್ಕೆ ತಿದ್ದುಪಡಿ ತರುವ ಪ್ರಕ್ರಿಯೆ ಆರಂಭವಾಗಿದೆ.
ಸರ್ಕಾರದ (ಒಳಾಡಳಿತ) ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಅಧ್ಯಕ್ಷತೆಯಲ್ಲಿ ಜ.21ರಂದು ನಡೆದ ವೃಂದ ಪರಿಶೀಲನಾ ಉಪ ಸಮಿತಿ ಸಭೆಯಲ್ಲಿ ವಯೋಮಿತಿ ಮರುನಿಗದಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯನ್ನು 28ರಿಂದ 30 ವರ್ಷಕ್ಕೆ, ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳ ವಯೋಮಿತಿಯನ್ನು 30ರಿಂದ 32 ವರ್ಷಕ್ಕೆ ಏರಿಸಲಾಗಿದೆ. ಆರಂಭದಲ್ಲಿ ಕರ್ನಾಟಕ ನಾಗರಿಕ ಸೇವೆಗಳ ನಿಯಮ 1977ರ (ಸಾಮಾನ್ಯ ನೇಮಕಾತಿ) ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 21 ವರ್ಷ ತುಂಬಿರಬೇಕು ಎಂಬ ಮಿತಿ ಇತ್ತು. 2004 ಡಿ.23ರಂದು ತಿದ್ದುಪಡಿ ತರುವ ಮೂಲಕ ಸಾಮಾನ್ಯ ವರ್ಗಕ್ಕೆ 24 ವರ್ಷ, ಎಸ್ಸಿ-ಎಸ್ಟಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ ವಯೋಮಿತಿ ನಿಗದಿಪಡಿಸಲಾಯಿತು. 2009 ಮೇ 5ರಂದು ಸಾಮಾನ್ಯ ವರ್ಗಕ್ಕೆ 26 ಹಾಗೂ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಕ್ಕೆ 28 ವರ್ಷಕ್ಕೆ ಏರಿಸಲಾಯಿತು.
2009ರ ನಂತರ 5 ವರ್ಷ ಹೊಸ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಿಲ್ಲ. ಹೀಗಾಗಿ 233 ಹುದ್ದೆಗಳ ನೇಮಕಾತಿಗೆ ಮಾತ್ರ ಅನ್ವಯಿಸುವಂತೆ 2014 ಆ.26ರಂದು ಸಾಮಾನ್ಯ ವರ್ಗಕ್ಕೆ 28 ಹಾಗೂ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಕ್ಕೆ 30 ವರ್ಷಕ್ಕೆ ಹೆಚ್ಚಿಸಿ ಆದೇಶಿಸಿತ್ತು. ಪುನಃ 2015 ಅ.5ರಂದು ಕಾಯಂ ಆಗಿ ಸಾಮಾನ್ಯ ವರ್ಗಕ್ಕೆ 28 ವರ್ಷ ಹಾಗೂ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಕ್ಕೆ 30 ವರ್ಷ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಯಿತು.
ಅಭ್ಯರ್ಥಿಗಳಿಗೆ ಅನ್ಯಾಯ :ಉತ್ತರ ಪ್ರದೇಶ, ಬಿಹಾರ ಸೇರಿ ಬೇರೆ ರಾಜ್ಯಗಳಲ್ಲಿ ಗರಿಷ್ಠ ವಯೋಮಿತಿ 33ರಿಂದ 40 ವರ್ಷ ಇದೆ. ಹೀಗಾಗಿ ಸಾಮಾನ್ಯ ಅಭ್ಯರ್ಥಿಗಳಿಗೆ 33 ವರ್ಷ ಹಾಗೂ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 35 ವರ್ಷಕ್ಕೆ ಹೆಚ್ಚಿಸುವಂತೆ 4-5 ವರ್ಷಗಳಿಂದ ಎಸ್​ಐ ಹುದ್ದೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು.
ಪದ್ಧತಿಗೆ ಆಕ್ಷೇಪ
ಪ್ರತಿವರ್ಷ ಮೇನಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಈಗಿರುವ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಪದ್ಧತಿ ಬದಲಾಯಿಸಿ ಮೊದಲಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ನಂತರ ಸಂದರ್ಶನ ನಡೆಸುವಂತೆ ಅಭ್ಯರ್ಥಿಗಳು ಸಲ್ಲಿಸಿರುವ ಮನವಿಗಳನ್ನೂ ಸಮಿತಿ ಪರಿಶೀಲನೆ ನಡೆಸಿದೆ.

| ಕೀರ್ತಿನಾರಾಯಣ ಸಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
