ಬೆಂಗಳೂರು:ಶಾಲಾ ಶಿಕ್ಷಣ ಇಲಾಖೆಯು ಈ ಬಾರಿ ರಾಜ್ಯ ಪ್ರಶಸ್ತಿ ಪಡೆಯುತ್ತಿರುವ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ನೀಡುತ್ತಿದ್ದ ನಗದು ಬಹುಮಾನ ಮೊತ್ತವನ್ನು 10 ಸಾವಿರ ರೂ.ಗಳಿಂದ 25 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ.
ಸೆ.5 ರಂದು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಲಾ ಶಿಕ್ಷನ ಇಲಾಖೆ ಸೂಚನೆ ನೀಡಿದೆ.
ಶಿಕ್ಷಕರ ದಿನಾಚರಣೆಗೆ ಯಾವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂಬ ಸೂಚನೆ ನೀಡಿದೆ. ಅದರಂತೆ ಇಲ್ಲಿಯವರೆಗೂ ರಾಜ್ಯಮಟ್ಟದ ಪ್ರತಸ್ತಿ ಪಡೆದ ಶಿಕ್ಷಕರಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ನೀಡುತ್ತಿತ್ತು. ಪ್ರತಿ ಜಿಲ್ಲೆಗೆ ಒಬ್ಬರಂತೆ ಆಯ್ಕೆ ಮಾಡಿ ಪ್ರಶಸ್ತಿ ವಿತರಣೆ ಮಾಡುತ್ತಿತ್ತು. ಈ ವರ್ಷದಿಂದ ಪ್ರಶಸ್ತಿ ಮೊತ್ತವನ್ನು ಪರಿಷ್ಕರಣೆ ಮಾಡಿದ್ದು, 25 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ.
ಉಳಿದಂತೆ, ರಾಷ್ಟ್ರ ಪ್ರಶಸ್ತಿಗೆ ನೀಡುವ ಮೊತ್ತವನ್ನು 50 ಸಾವಿರ ರೂ., ರಾಜ್ಯ ಪ್ರಶಸ್ತಿ ಪುರಸ್ಕೃತ ಶಾಲೆಗಳಿಗೆ ನೀಡುವ ಮೊತ್ತವನ್ನು 50 ಸಾವಿರ ರೂ.ಗಳನ್ನು ಹಿಂದಿನ ವರ್ಷದಂತೆಯೇ ಮುಂದುವರಿಸಿದೆ. ಒಟ್ಟಾರೆ ಕಾರ್ಯಕ್ರಮಕ್ಕಾಗಿ 48,75,000 ರೂ.ಗಳಿಗೆ ಅನುಮೋದನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
