ಕಲಬುರಗಿ:ರಸ್ತೆಯಲ್ಲೇ ವಾಹನವೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಜ್ವಾಲೆ ಧಗಧಗಿಸಿ ಉರಿದ ಪ್ರಕರಣವೊಂದು ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ.
ಕಲಬುರಗಿ ತಾಲೂಕಿನ ಶಿರನೂರು ಬಳಿ ಬೀದರ್- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಅಶೋಕ್​ ಲೇಲ್ಯಾಂಡ್​ನ ಟಾಟಾ ಏಸ್​ ಗೂಡ್ಸ್ ವಾಹನದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಾಹನಕ್ಕೆ ಜ್ವಾಲೆ ಆವರಿಸಿಕೊಂಡಿದೆ.
ಯಡ್ರಾಮಿಯಿಂದ ಕಲಬುರಗಿಗೆ ಬರುತ್ತಿದ್ದ ಈ ಗೂಡ್ಸ್ ವಾಹನವನ್ನು ಮುಗಳನಾಗಾಂ ಗ್ರಾಮದ ನಿವಾಸಿ ಚಾಲಕ ಭೀಮಾಶಂಕರ ಚಲಾಯಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಾಹನ ನಿಲ್ಲಿಸಿ ಅವರು ಇಳಿದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನದಲ್ಲಿ ಸುಮಾರು 4 ಲಕ್ಷ ರೂ. ಮೌಲ್ಯದ ಸರಕಿತ್ತು.

ಪಡೆದಿದ್ದ ಲಂಚಕ್ಕೆ 50 ಸಾವಿರ ರೂ. ಸೇರಿಸಿ ವಾಪಸ್​ ಕೊಡಲು ಹೋಗಿ ಸಿಕ್ಕಿಬಿದ್ದ ಕೆಎಎಸ್​ ಅಧಿಕಾರಿ

ಅಂಗಿ-ಬನಿಯನ್ ತೆಗೆಯಲು ತಕರಾರು: ದೇವಸ್ಥಾನಗಳಲ್ಲಿನ ಫಲಕ ತೆಗೆಸುವಂತೆ ಕೋರಿ ಅರ್ಜಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 1 =
Remember me
