ಬೆಂಗಳೂರು:ವರ್ಷಾಂತ್ಯದೊಳಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ಆರಂಭಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಲು ಹಾಗೂ ಈಗಾಗಲೆ ಅಸ್ತಿತ್ವದಲ್ಲಿರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೊರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠಕ್ಕೆ ಸರ್ಕಾರ ಈ ಕುರಿತು ಪ್ರಮಾಣಪತ್ರ ಸಲ್ಲಿಸಿದೆ.
ಕಾರ್ಯಾರಂಭದ ವೇಳಾಪಟ್ಟಿ:ಚಿಕ್ಕಮಗಳೂರು, ವಿಜಯಪುರ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜು.15ರೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿದ್ದು, ಬೀದರ್, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಡಗು, ಚಾಮರಾಜನಗರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆ.1ರೊಳಗೆ ಗೋಶಾಲೆಗಳ ಕಾರ್ಯಾರಂಭಿಸಲಾಗುವುದು. ರಾಯಚೂರು, ಧಾರವಾಡ, ಮಂಡ್ಯ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಸೆ.1ರೊಳಗೆ ಹಾಗೂ ಗದಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅ.1ರೊಳಗೆ ಗೋಶಾಲೆಗಳನ್ನು ಆರಂಭಿಸಲಾಗುವುದು. ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್ ಅಂತ್ಯದೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ ಎಂದು ಸರ್ಕಾರದ ಪ್ರಮಾಣಪತ್ರದಲ್ಲಿ ಹೇಳಲಾಗಿದೆ.
50 ಕೋಟಿ ರೂ. ಅನುದಾನ:ಜಿಲ್ಲೆಗೊಂದರಂತೆ 30 ಗೋಶಾಲೆಗಳ ಜತೆಗೆ 70 ಹೆಚ್ಚುವರಿ ಗೋಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ನಿರ್ಮಾಣ ಹಂತದಲ್ಲಿರುವ ಗೋಶಾಲೆಗಳಿಗೆ 15 ಕೋಟಿ ರೂ., ಹೊಸ 70 ಗೋಶಾಲೆಗಳ ನಿರ್ವಣಕ್ಕೆ 20 ಕೋಟಿ ರೂ. ಸೇರಿ ಗೋಶಾಲೆಗಳ ಸ್ಥಾಪನೆಗೆ ಒಟ್ಟು 50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಜತೆಗೆ, ಖಾಸಗಿ ಸಂಘ-ಸಂಸ್ಥೆಗಳು 197 ಗೋಶಾಲೆಗಳು ನಡೆಸುತ್ತಿದ್ದು, ಇವುಗಳಿಗೂ ಸರ್ಕಾರದಿಂದ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ಖಾಸಗಿ ಗೋಶಾಲೆಗಳಿಗೆ 2021-22ನೇ ಸಾಲಿನಲ್ಲಿ 3.77 ಕೋಟಿ ರೂ. ಹಾಗೂ 2022-23ನೇ ಸಾಲಿನಲ್ಲಿ 3.77 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಪಶುಸಂಗೋಪನಾ ಇಲಾಖೆ 2019ರಲ್ಲಿ ನಡೆಸಿದ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 77,075 ಬಿಡಾಡಿ ದನಗಳಿದ್ದು, ಅವುಗಳ ನಿರ್ವಹಣೆಗೆ ಪ್ರತಿ ಜಿಲ್ಲೆಗೊಂದು ಗೋಶಾಲೆ ತೆರೆಯಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. 2021-22ನೇ ಸಾಲಿನ ಬಜೆಟ್​ನಲ್ಲಿ ಜಿಲ್ಲೆಗೊಂದು ಗೋಶಾಲೆ ಆರಂಭಿಸುವುದಾಗಿ ಸಿಎಂ ಘೊಷಿಸಿದ್ದರು. ಅದಕ್ಕಾಗಿ 15 ಕೋಟಿ ರೂ. ಅನುದಾನ ಸಹ ಮೀಸಲಿಡಲಾಗಿದೆ. ಗೋಶಾಲೆಗಳಿಗೆ ಜಾಗ ಗುರುತಿಸುವುದು, ಅದರ ಸ್ಥಾಪನೆ ಮತ್ತು ನಿರ್ವಹಣೆ, ಅನುದಾನದ ಬಳಕೆಯ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಜಿಲ್ಲಾ ಮಟ್ಟದ ಸಮಿತಿ’ಗಳಿಗೆ (ಡಿಎಸ್​ಪಿಸಿಎ) ವಹಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ. ರಾಜ್ಯದ 30 ಜಿಲ್ಲೆಗಳಲ್ಲಿ ಬೆಂಗಳೂರು ನಗರ, ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭೂವಾಜ್ಯದಿಂದಾಗಿ ಜಾಗ ಗುರುತಿಸಲು ವಿಳಂಬವಾಗಿತ್ತು. ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬೇರೆ ಜಾಗ ಗುರುತಿಸಲಾಗಿದೆ. ಬೆಂಗಳೂರಿನ ಜಾಗ ಗುರುತಿಸುವ ಪ್ರಕ್ರಿಯೆಗೆ ಸ್ವಲ್ಪ ಕಾಲಾವಕಾಶ ಬೇಕಾಗಬಹುದು. ಉಳಿದಂತೆ 29 ಜಿಲ್ಲೆಗಳಲ್ಲಿ ಗುರುತಿಸಲಾದ ಜಾಗವನ್ನು ಡಿಎಸ್​ಪಿಸಿಎಗೆ ಹಸ್ತಾಂತರಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಮಸೀದಿ, ಮಂದಿರ, ಚರ್ಚ್​ಗಳು ಸೇರಿ ರಾಜ್ಯ ಎಲ್ಲ ಧಾರ್ವಿುಕ ಸ್ಥಳಗಳು ಹಾಗೂ ಪಬ್-ರೆಸ್ಟೋರೆಂಟ್​ಗಳಲ್ಲಿ ಧ್ವನಿವರ್ಧಕಗಳ ದುರ್ಬಳಕೆ ತಡೆಯಲು ವಿಶೇಷ ಅಭಿಯಾನ ನಡೆಸಿ, ಕೈಗೊಂಡ ಕ್ರಮಗಳ ಕುರಿತು 3 ವಾರಗಳಲ್ಲಿ ವರದಿ ಸಲ್ಲಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹಾಗೂ ನಗರದ ಕೆಲ ಮಸೀದಿಗಳ ಧ್ವನಿವರ್ಧಕಗಳಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯ ತಡೆಯಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆ ಯಾಗಿರುವ ಪಿಐಎಲ್​ಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ಈ ನಿರ್ದೇಶನ ನೀಡಿತು. ದೇವಸ್ಥಾನ, ಮಸೀದಿ, ಗುರುದ್ವಾರ, ಚರ್ಚ್ ಸೇರಿ ಧಾರ್ವಿುಕ ಕೇಂದ್ರಗಳು ಹಾಗೂ ಪಬ್-ರೆಸ್ಟೋರೆಂಟ್​ಗಳು ಧ್ವನಿವರ್ಧಕ ಅಥವಾ ಶಬ್ದ ಉಂಟುಮಾಡುವ ಇತರ ಉಪಕರಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ತಡೆಯಲು ವಿಶೇಷ ಅಭಿಯಾನ ಕೈಗೊಳ್ಳಬೇಕು. ಅನುಮತಿ ಇಲ್ಲದೆ ಧ್ವನಿವರ್ಧಕ ಉಪಯೋಗಿಸುತ್ತಿರುವ ಅಥವಾ ನಿಗದಿತ ಡೆಸಿಬಲ್​ಗಿಂತ ಹೆಚ್ಚು ಶಬ್ದ ಉಂಟು ಮಾಡುತ್ತಿರುವ ಪ್ರಕರಣಗಳನ್ನು ಪತ್ತೆ ಹಚ್ಚಬೇಕು. ಅದಕ್ಕಾಗಿ ಧಾರ್ವಿುಕ ಸ್ಥಳಗಳ ಸರ್ವೆ ನಡೆಸಬೇಕು. ಅನಧಿಕೃತ ವಾಗಿ ಧ್ವನಿವರ್ಧಕ ಬಳಸುತ್ತಿದ್ದರೆ, ಸಂಬಂಧಪಟ್ಟ ವರಿಗೆ ನೋಟಿಸ್ ನೀಡಿ ತೆರವುಗೊಳಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು 3 ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಿದ ಪೀಠ ವಿಚಾರಣೆ ಮುಂದೂಡಿತು.
ಶಾಶ್ವತ ಪರವಾನಗಿ ಇಲ್ಲ:ರಾಜ್ಯದಲ್ಲಿ ಧ್ವನಿವರ್ಧಕಗಳ ಬಳಕೆಗೆ ಶಾಶ್ವತ ಪರವಾನಗಿ ನೀಡಲಾಗುವುದಿಲ್ಲ. ಗರಿಷ್ಠ 2 ವರ್ಷದವರೆಗೆ ಪರವಾನಗಿ ನೀಡಲಾಗುವುದು. ಆ ಅವಧಿ ಪೂರ್ಣಗೊಂಡ ಬಳಿಕ ಪರವಾನಗಿ ನವೀಕರಣ ಮಾಡಬೇಕು. ಸ್ಪೀಕರ್​ಗಳ ಬಳಕೆಗೆ ಅನುಮತಿ ನೀಡಲು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಆ ಸಮಿತಿಯು ಅನುಮತಿ ಮತ್ತು ನವೀಕರಣಕ್ಕಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ, ನಿರ್ಧಾರ ಕೈಗೊಳ್ಳುತ್ತದೆ ಎಂದು ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
