ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ 2.0ಕ್ಕೆ ಶತದಿನೋತ್ಸವ ಸಡಗರ. ಅನೇಕ ಸವಾಲುಗಳನ್ನು ಎದುರಿಸಿ ನೂರು ದಿನ ಪೂರೈಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಪ್ರತಿಕ್ರಿಯೆ ನೀಡಿದ್ದಾರೆ.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 100 ದಿನಗಳು ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ.ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜತೆಜತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ ಎಂದು ಸಂಭ್ರಮಿಸಿದ್ದಾರೆ.ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಕೋರಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 + six =
Remember me
