ಉತ್ತರಕನ್ನಡ:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ವಿರುದ್ಧ ಮುನಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ ಕುರಿತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಗೋಕರ್ಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಹೆಬ್ಬಾರ್​, ಸರ್ಕಾರವನ್ನು ಮುನ್ನಡೆಸುವ ಮುಖ್ಯಮಂತ್ರಿಯವರಿಗೆ ಪರಮೋಚ್ಚ ಅಧಿಕಾರವಿದೆ. ಅವರು ಯಾವುದೇ ಇಲಾಖೆಯಲ್ಲೂ ಕಾನೂನುಬದ್ಧವಾಗಿ ಅಧಿಕಾರ ಚಲಾಯಿಸಬಹುದು. ಈ ಹಿಂದಿನ ಎಲ್ಲ ಮುಖ್ಯಮಂತ್ರಿಗಳೂ‌ ಹೀಗೆಯೇ ಅಧಿಕಾರ ಚಲಾಯಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ನೀವು ಸಿಎಂ ಆಗೋದಾದ್ರೆ ಜೆಡಿಎಸ್‌ ಶಾಸಕರೆಲ್ಲ ಜೈ ಅಂತೀವಿ: ಶಾಸಕ ಎಚ್‌.ಡಿ. ರೇವಣ್ಣ ಕೊಟ್ರು ಆಫರ್‌
ಅಸಮಾಧಾನ ಇದ್ದಿದ್ದರೆ ಈಶ್ವರಪ್ಪನವರು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಬಹುದಿತ್ತು. ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಅವರು ಎಲ್ಲ ಶಾಸಕರ ಹಿತವನ್ನು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ ಹೆಬ್ಬಾರ್​, ಬಸವನಗೌಡ ಯತ್ನಾಳ್ ಅವರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?
ಯತ್ನಾಳ್ ಇತ್ತೀಚೆಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಬ್ಬಾರ್, ಯತ್ನಾಳ್ ಅವರಿಗೆ ಅನೇಕ ಬಾರಿ ರಾಷ್ಟ್ರೀಯ ನಾಯಕರು ಎಚ್ಚರಿಕೆ ನೀಡಿದ್ದಾರೆ. ಪದೇಪದೆ ಈ ರೀತಿ ಹೇಳಿಕೆ ನೀಡುತ್ತಿದ್ದಲ್ಲಿ ಕಾದು ನೋಡಿ ಎಂಬುದಾಗಿ ಹೇಳಿದರು.
ನಿಮ್ಮೂರಿನ ಇನ್​ಸ್ಪೆಕ್ಟರ್​ ಬದಲಾಗಿದ್ದಾರಾ ನೋಡಿಕೊಳ್ಳಿ: 18 ಡಿವೈಎಸ್‌ಪಿ, 100 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ; ಇಲ್ಲಿದೆ ಪೂರ್ತಿ ಪಟ್ಟಿ

ಈ ಮಹಾನಗರದಲ್ಲಿ ಎತ್ತರದ ಕಟ್ಟಡಗಳಲ್ಲಿ ವಾಸಿಸುವವರಿಗಿಂತ ಕೊಳೆಗೇರಿ ನಿವಾಸಿಗಳೇ ವಾಸಿ!: ಹೀಗಂದಿದ್ಯಾರು, ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
