ಬೆಂಗಳೂರು:ಬಾಕಿ ವೇತನ ಮತ್ತು ಎರಡು ವರ್ಷಗಳ ಹಿಂಬಾಕಿ (ಹರಿಯರ್ಸ್ಸ್), ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ಒದಗಿಸುವಂತೆ ರಾಜ್ಯ ಡಯಾಲಿಸಿಸ್ ನೌಕರರ ಸಂಘ ಸರ್ಕಾರವನ್ನು ಆಗ್ರಹಿಸಿದೆ.
ರಾಜ್ಯದಲ್ಲಿ 167 ಡಯಾಲಿಸಿಸ್ ಕೇಂದ್ರಗಳಿದ್ದು, ಈವರೆಗೂ ಇವುಗಳ ನಿರ್ವಹಣೆ ಮಾಡುತ್ತಿದ್ದ ಕೊಲ್ಕತ್ತಾ ಮೂಲದ ಎಸ್‌ಕಾಗ್ ಸಂಜೀವಿನಿ ಪ್ರೈ.ಲಿ.ನ ಗುತ್ತಿಗೆ ಸೆ.30ಕ್ಕೆ ಪೂರ್ಣಗೊಂಡಿದೆ. ಆದರೆ ಸಂಸ್ಥೆಯಿಂದ 2ತಿಂಗಳ ವೇತನ ಸೇರಿ ಸೌಲಭ್ಯಗಳು ಬಾಕಿ ಉಳಿದಿದ್ದು, ವೇತನ ಪಾವತಿಗೆ ಶೀಘ್ರ ಕ್ರಮ ವಹಿಸುವಂತೆ ಸಂಘದ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಒಂದು ಸಾವಿರಕ್ಕೂ ಅಕ ಮಂದಿ ಈ ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೆರಿಗೆ ರಜೆ ಪಡೆದಿದ್ದ 19 ಮಂದಿಗೆ ಆರು ತಿಂಗಳ ರಜೆ ಸಹಿತ ವೇತನ ದೊರೆತಿಲ್ಲ. ಇದನ್ನು ಒದಗಿಸುವ ಬಗ್ಗೆಯೂ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − three =
Remember me
