ಬೆಂಗಳೂರು:ಅಗತ್ಯವಿರುವ ಕಡೆಯಲ್ಲಿ ತಾಲೂಕು ಪಂಚಾಯ್ತಿ ಕ್ಷೇತ್ರ ಮರು ವಿಂಗಡನೆ ಮತ್ತು ಪಂಚಾಯತ್​ರಾಜ್ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಅವಧಿಯನ್ನು 60 ತಿಂಗಳಿಗೆ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಗೃಹ ಕಚೇರಿಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಇಲಾಖೆಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.
ಶಿವಮೊಗ್ಗ ಜಿಲ್ಲೆಯನ್ನು ಕೊಡಗು, ಚಿಕ್ಕಮಗಳೂರು (ಭಾಗಶ:) ಉತ್ತರ ಕನ್ನಡ ರೀತಿಯಲ್ಲಿ ಪರಿಗಣಿಸಿ 21 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಸದಸ್ಯರ ಸ್ಥಾನಗಳನ್ನು ಮರು ನಿಗದಿಪಡಿಸುವ ತಿದ್ದುಪಡಿಗೆ ಮುಖ್ಯಮಂತ್ರಿಗಳು ಅನುಮತಿಸಿದ್ದಾರೆ.
ಕ್ಷೇತ್ರ ಮರುವಿಂಗಡನೆಗೆ ಸಂಬಂಧಿಸಿದಂತೆ ಸಲ್ಲಿಸಿದ ಆರು ಪ್ರಸ್ತಾವನೆಗಳಲ್ಲಿ ಒಂದಕ್ಕೆ ಸಿಎಂ ಅನುಮೋದನೆ ನೀಡಿದ್ದು, ತಿದ್ದುಪಡಿ ಪ್ರಕ್ರಿಯೆಗಾಗಿ ಕಾನೂನು ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.
ಸಿಎಂ ತಾತ್ವಿಕ ಒಪ್ಪಿಗೆ:ಕಾನೂನು ಚೌಕಟ್ಟಿನಲ್ಲಿ ಶಾಸಕರು ಮನವಿ ಕೊಡುತ್ತಿದ್ದು, ಪಿಡಿಓಗಳನ್ನು ವರ್ಗಾವಣೆ ಕುರಿತು ಸಮಾಲೋಚನೆ ಕೈಗೊಳ್ಳಲು ರೂಪುರೇಷೆಗಳನ್ನು ಸಿದ್ಧಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಗ್ರಾಪಂಗೆ 1 ಕೋಟಿ:ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ 1 ಕೋಟಿ ರೂ. ಅನುದಾನ ನೀಡುವ ಬಗ್ಗೆ ಮುಂದಿನ ಆರ್ಥಿಕ ವರ್ಷದಲ್ಲಿ ನಿರ್ಧಾರ ಕೈಗೊಳ್ಳಲಿದೆ.
ಸಿಬ್ಬಂದಿ ಕಡಿತ:ಕೆಆರ್​ಐಡಿಎಲ್ ನಲ್ಲಿ 800 ಜನ ಹೆಚ್ಚುವರಿಯಾಗಿ ನೇಮಕವಾಗಿದ್ದಾರೆ. ಕನಿಷ್ಠ 300 ಜನರನ್ನಾದರೂ ಕೈಬಿಡಬೇಕಾಗುತ್ತದೆ. 300 ಜನರನ್ನು ತೆಗೆಯಲು ಪಟ್ಟಿ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಹಿಂದಿನ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನಿಸಿದೆ. 37,000 ಕಾಮಗಾರಿ ಮಂಜೂರು ಮಾಡಿದ್ದು, 5 ವರ್ಷಗಳಲ್ಲಿ 10,500 ಕೋಟಿ ರೂ. ಕಾಮಗಾರಿಗಳ ಪೈಕಿ 3,500 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ.
| ಪ್ರಿಯಾಂಕಾ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
