ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಸರ ವ್ಯಕ್ತಪಡಿಸಿದ್ದು, ಮತ್ತೊಮ್ಮೆ ಮನವಿ ಮಾಡಿಕೊಳ್ಳಲು ಮುಂದಾಗಿದೆ. ಮಾತ್ರವಲ್ಲ, ಮನವಿಗೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ಹೋರಾಟಕ್ಕೂ ಚಿಂತನೆ ನಡೆಸಿದೆ.
ರಾಜ್ಯ ಸರ್ಕಾರದ ಈ ಸಲದ ಬಜೆಟ್​ನಿಂದ ಸರ್ಕಾರಿ ನೌಕರರಿಗೆ ಭ್ರಮನಿರಸನವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತೀವ್ರ ಅಸಮಾಧಾನ ವ್ಯಕ್ತಪಡಿದ್ದಾರೆ. ಈ ಬಜೆಟ್​​ನಲ್ಲಿ 7ನೇ ವೇತನ ಆಯೋಗ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದರೂ ಅದನ್ನು ಘೋಷಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಮ್ಮ ಬೇಡಿಕೆ ಕುರಿತು ಮುಖ್ಯಮಂತ್ರಿಯವರಿಗೆ ಈಗಲೂ ಇನ್ನೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದು, ಬಜೆಟ್​ ಉತ್ತರ ನೀಡುವ ವೇಳೆಯಲ್ಲಾದರೂ ಅವರು ಅದನ್ನು ಘೋಷಣೆ ಮಾಡಬಹುದು. ಅದಾಗದಿದ್ದರೆ ನಾವು ಎಲ್ಲ ಪ್ರಮುಖರ ಜೊತೆ ಚರ್ಚೆ ಮಾಡಿ ಮುಂದೆ ಏನು ತೀರ್ಮಾನ ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡುತ್ತೇವೆ. ಇಂಥ ಸಂದರ್ಭದಲ್ಲಿ ಹೋರಾಟ ಮಾಡುವ ಅವಕಾಶ ಇದೆ. ಆದರೆ ಈಗ ನಾವು ಆ ಮಟ್ಟಕ್ಕೆ ಹೋಗುವುದಿಲ್ಲ. ಐದು ಸಾವಿರ ಮಂದಿ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯ ಪಡೆದು ಮುಂದಿನ ನಿಲುವು ತಳೆಯುತ್ತೇವೆ. ಹೋರಾಟದ ಅವಕಾಶವೂ ನಮ್ಮ ಮುಂದಿದೆ. ಅದಾಗ್ಯೂ ಸರ್ಕಾರದ ತೀರ್ಮಾನದ ಬಳಿಕ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂಬುದಾಗಿ ಅವರು ಹೇಳಿದ್ದಾರೆ.
ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!

ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
