ಬೆಂಗಳೂರು:ಲಾಕ್‌ಡೌನ್‌ನಿಂದಾಗಿ ಸರ್ಕಾರಕ್ಕೆ ಆದಾಯವೇ ನಿಂತು ಹೋಗಿದೆ, ಇಂಥ ಸಂದರ್ಭದಲ್ಲಿ ನಮ್ಮ ಸಂಬಳಕ್ಕೆ ಎಲ್ಲಿ ಕತ್ತರಿ ಬೀಳುತ್ತದೋ ಎಂಬ ಅಳುಕಿನಲ್ಲಿದ್ದ ಸರ್ಕಾರಿ ನೌಕರರು ಸಮಾಧಾನ ಪಟ್ಟುಕೊಳ್ಳುವ ಸುದ್ದಿಯೊಂದಿದೆ.
ಏಪ್ರಿಲ್‌ನ ವೇತನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ, ಕಡಿತವೂ ಮಾಡುವುದಿಲ್ಲ ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ತೆಲಂಗಾಣ ಸೇರಿ ವಿವಿಧ ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕಡಿತ ಪ್ರಸ್ತಾಪ ಮಾಡಲಾಗಿದೆ. ಆದರೆ, ನಾವು ಕಡಿತ ಮಾಡುವ ಆಶಯ ಹೊಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಜ್ಯದ ಬೊಕ್ಕಸಕ್ಕೆ ಆದಾಯ ಬರದೇ ಇರಬಹುದು, ಈ ತಿಂಗಳು ವೇತನ ಪಾವತಿಗೆ ಸಮಸ್ಯೆಯಾಗದಂತೆ ಸಂಪನ್ಮೂಲ ಕ್ರೋಡೀಕರಣ ಮಾಡಿಕೊಳ್ಳಲಾಗುತ್ತದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.ಸಚಿವರು, ಶಾಸಕರು, ಪರಿಷತ್ ಸದಸ್ಯರ ವೇತನ ಕಡಿತ ತೀರ್ಮಾನ ಹೊರಬೀಳುತ್ತಿದ್ದಂತೆ ಮಾರ್ಚ್‌ನಲ್ಲಿ ವೇತನ ಕಡಿತವಾಗಬಹುದು ಎಂದು ಕೆಲವರು ಭಾವಿಸಿದ್ದರು, ಬಳಿಕ ಏಪ್ರಿಲ್‌ನಲ್ಲಿ ಸಮಸ್ಯೆ ಆಗಬಹುದೆಂದು ನೌಕರರ ಹಂತದಲ್ಲಿ ಚರ್ಚೆಯೂ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೇತನ ಕಡಿತ ಯಾವುದೇ ಪ್ರಸ್ತಾಪ ಇಲ್ಲ ಎಂದಿದ್ದರು.
ಏಪ್ರಿಲ್‌ನಲ್ಲಿ ಸರ್ಕಾರದ ಬೊಕ್ಕಸಕ್ಕೆ ಹಣ ಬಾರದೇ ಇರಬಹುದು. ಆದರೆ, ವಿವಿಧ ಮೂಲಗಳಲ್ಲಿ ಮೀಸಲಿಟ್ಟಿರುವ ಹಣವನ್ನು ಬಳಸಿಕೊಳ್ಳಲು ಅವಕಾಶವಿದೆ. ಸರಿಸುಮಾರು ಒಂದು ತಿಂಗಳಿಗೆ 7500 ಕೋಟಿ ರೂಪಾಯಿ ವೇತನ, ಪಿಂಚಣಿಗೆ ಬೇಕಾಗಬಹುದು. ಅಷ್ಟು ಹಣದ ಕೊರತೆ ಏನಿಲ್ಲ. ಮುಂದೆ ಪರಿಸ್ಥಿತಿ ಸುಧಾರಿಸಲಿದೆ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದೇ ಮುಳುವಾಗುತ್ತಾ ಜಮೀರ್‌ಗೆ? ಕ್ವಾರಂಟೈನ್‌ಗೆ ಒಳಗಾಗ್ತಾರಾ ಚಾಮರಾಜಪೇಟೆ ಶಾಸಕ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
