ಬೆಂಗಳೂರು:ಎಲ್ಲಾ ಸರ್ಕಾರಿ ನೌಕರರು ಇನ್ನು ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ:ಕರ್ತವ್ಯ ಲೋಪದಡಿ ಅಮಾನತುಗೊಂಡಿದ್ದ ಪೊಲೀಸ್ ಪೇದೆಗೆ ಮುಖ್ಯಮಂತ್ರಿ ಪದಕ: ರಾಜ್ಯ ಸರ್ಕಾರ ವಿರುದ್ಧ ಬಿ.ವೈ ವಿಜಯೇಂದ್ರ ಆಕ್ರೋಶ
”ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಟ್ಯಾಗ್ ಹಾಕಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್‌ ಬಿ.ಕೆ ಆದೇಶಿಸಿದ್ದಾರೆ.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಹಿನ್ನಲೆಯಲ್ಲಿ ಸರ್ಕಾರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕರ್ನಾಟಕ ಅಭಿಯಾನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಐಡಿ ಕಾರ್ಡ್ ಟ್ಯಾಗ್ ಅನ್ನು ಕೆಂಪು-ಹಳದಿ ಟ್ಯಾಗ್ ಬಳಸುವಂತೆ ಆದೇಶ ಹೊರಡಿಸಲಾಗಿದೆ.
ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ ಅರೆ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆ ಐಡಿ ಕಾರ್ಡ್‌ಗೆ ಹೊಂದುವಂತೆ ಸಿಬ್ಬಂದಿ ಹಳದಿ ಮತ್ತು ಕೆಂಪು ಬಣ್ಣದ ಗುರುತಿನ ಚೀಟಿ ಟ್ಯಾಗ್​ ನೀಡಲು ಸಂಬಂಧಿಸಿದ ಇಲಾಖೆಗಳು ಕ್ರಮವಹಿಸುವಂತೆ ಸೂಚಿಸಲಾಗಿದೆ.
ಮಹಿಳಾ ಪೈಲೆಟ್​ಗಳ ಹೆಚ್ಚಳಕ್ಕೆ ಇಂಡಿಗೊ ನಿರ್ಧಾರ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + six =
Remember me
