ಬೆಂಗಳೂರು: ಇತ್ತೀಚೆಗಷ್ಟೇ ಸರ್ಕಾರಿ ನೌಕರರ ಸಂಘದ ಮುಷ್ಕರದ ಬಿಸಿ ಎದುರಿಸಿ, ವೇತನ ಏರಿಸಿ ನಿರಾಳಗೊಂಡಿರುವ ರಾಜ್ಯ ಸರ್ಕಾರಕ್ಕೆ ಇದೀಗ ಇನ್ನೊಂದು ತಲೆನೋವು ಎದುರಾಗಿದೆ. ಏಕೆಂದರೆ ಮತ್ತೊಂದು ಸರ್ಕಾರಿ ನೌಕರರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದೆ.
ಇದನ್ನೂ ಓದಿ:ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧಾರ ಮಾಡಿದೆ. ಇದಕ್ಕೆ ಕೆಇಬಿ ಇಂಜಿನಿಯರುಗಳ ಸಂಘ, ಕೆಇಬಿ ಎಸ್​ಸಿ-ಎಸ್​ಟಿ ನೌಕರರ ಕಲ್ಯಾಣ ಸಂಸ್ಥೆ, ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ, ಕವಿಪ್ರನಿನಿ ಡಿಪ್ಲೊಮಾ ಇಂಜಿನಿಯರುಗಳ ಸಂಘಗಗಳೂ ಕೈಜೋಡಿಸಿವೆ.
ಇದನ್ನೂ ಓದಿ:ಸದ್ಯಕ್ಕಿಲ್ಲ 5 ಮತ್ತು 8ನೇ ತರಗತಿ ಪರೀಕ್ಷೆ; ಮುಂದೂಡುವುದಾಗಿ ಹೇಳಿದ ಸರ್ಕಾರ
ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟಿಸು ಜಾರಿಮಾಡಿದ್ದು, ಈಗಾಗಲೇ ಹತ್ತು ದಿನಗಳು ಉರುಳಿದ್ದರೂ ಇಲ್ಲಿಯವರೆಗೂ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆಯದಿರುವುದರಿಂದ ಅನಿವಾರ್ಯವಾಗಿ ನಿಗದಿಯಂತೆ ಮಾ.16ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್​.ಎಚ್.ಲಕ್ಷ್ಮೀಪತಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − twelve =
Remember me
