ಬೆಂಗಳೂರು:ರಾಜ್ಯಾದ್ಯಂತ ಜೆಡಿಎಸ್ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಪಾಲ ಥಾವರಚಂದ ಗೆಹ್ಲೋಥ್ ಅವರಿಗೆ ಸಲ್ಲಿಸಿದರು.
ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ರಾಜಭವನಕ್ಕೆ ನಿಯೋಗದಲ್ಲಿ ತೆರಳಿದ ಮನವಿ ಸಲ್ಲಿಸಿದರು.
ಕೂಡಲೇ ತಾವು ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ ಅನುದಾನ ಕೊಡಿಸಲು ಮಧ್ಯಪ್ರದೇಶ ಮಾಡಬೇಕೆಂದು ರಾಜ್ಯಪಾಲರಲ್ಲಿ ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯ ಎದುರಿಸುತ್ತಿರುವ ತೀವ್ರ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಮಾನ್ಸೂನ್ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48.15 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆ. ಕೃಷಿ ಬೆಳೆ ಹಾಗೂ 2.06 ಲಕ್ಷ ಹೆ. ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರ್ಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35,162 ಕೋಟಿ ರೂ. ಬೆಳೆ ಹಾನಿ ಆಗಿದೆ. ಎನ್‌ಸಿಆರ್‌ಎ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ 18,171 ಕೋಟಿ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಆದರೆ ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ. ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂ. ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ರಾಜ್ಯಪಾಲರಲ್ಲಿ ಮನವಿ ಮಾಡಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಕೂಡ ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ಕುಮಾರಸ್ವಾಮಿ ಅವರು ರಾಜ್ಯಪಾಲರ ಬಳಿ ದೂರಿದರು.
ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಬಹಳ ಅಸಡ್ಡೆಯಿಂದ ನೋಡುತ್ತಿದೆ. ತೀವ್ರ ನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡದೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂಬ ಅಂಶವನ್ನು ರಾಜ್ಯಪಾಲರ ಗಮನಕ್ಕೆ ತಂದರು.ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸಿಲ್ಲ. ರಾಜಕೀಯದಲ್ಲಿ ಮೈ ಮರೆತಿದೆ ಎಂದು ಹೇಳಿದರು.
ರಾಜ್ಯಪಾಲರ ಭೇಟಿ ನಂತರ ರಾಜಭವನದ ಮುಂಭಾಗದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ, ನಮ್ಮ ಮನವಿಗೆ ರಾಜ್ಯಪಾಲರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ನಾಡಿನ ಜನರ ಹಿತ ಕಾಪಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + sixteen =
Remember me
