ಬೆಂಗಳೂರು2024-25ನೇ ಸಾಲಿನ ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಶೇ.10 ಶುಲ್ಕ ಹೆಚ್ಚಳ ಮಾಡಲು ಸರ್ಕಾರವು ಒಪ್ಪಿಗೆ ನೀಡಿದೆ. ಸರ್ಕಾರಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಇನ್ನಷ್ಟೇ ನಿಗದಿಯಾಗಬೇಕಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
2023-24ನೇ ಶೈಕ್ಷಣಿಕ ಸಾಲಿಗೆ ಶೇ.7ರಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿತ್ತು. ಆದ್ದರಿಂದ ಈ ವರ್ಷ ಕನಿಷ್ಠ ಶೇ.15 ಶುಲ್ಕ ಮಾಡಬೇಕು ಎಂಬುದು ಖಾಸಗಿ ಕಾಲೇಜುಗಳ ಬೇಡಿಕೆಯಾಗಿತ್ತು. ಆದರೆ ಸರ್ಕಾರವು ಅಂತಿಮವಾಗಿ ಶೇ.10ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ನೀಡಿದೆ. ಪರಿಷ್ಕೃತ ಶುಲ್ಕಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯು ಶೀಘ್ರವೇ ಪ್ರಕಟಿಸಲಿದೆ ಎಂದು ತಿಳಿಸಿದೆ.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಇಂಜಿನಿಯರಿಂಗ್ ಶುಲ್ಕವನ್ನು ಶೇ.10ರಂತೆ ಎರಡು ವರ್ಷಕ್ಕೆ ಏರಿಕೆ ಮಾಡಿದ್ದರು. ನಂತರ ಅಧಿಕಾರಿಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರವು ಶೇ.10ರ ಬದಲಾಗಿ ಶೇ.7ಕ್ಕೆ ಇಳಿಕೆ ಮಾಡಿತ್ತು.
ವೈದ್ಯಕೀಯ ಕೋರ್ಸ್‌ಗಳ ಶುಲ್ಕ ನಿಗದಿಗೆ ಸಮಯವಿದೆ. ಇದನ್ನು ಕೂಡ ಸದ್ಯದಲ್ಲಿಯೇ ನಿಗದಿ ಮಾಡಲಾಗುತ್ತದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎನ್. ಪ್ರಸನ್ನ, ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ, ಎಂ.ಎಸ್. ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಂ.ಆರ್. ಜಯರಾಮ್ ಸೇರಿ ಖಾಸಗಿ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
2023-24ನೇ ಸಾಲಿನ ಶುಲ್ಕಕಳೆದ ಸಾಲಿನಲ್ಲಿ ಅಂದರೆ 2023-24ನೇ ಸಾಲಿನಲ್ಲಿ ಖಾಸಗಿ ಕಾಲೇಜುಗಳಲ್ಲಿ ಟೈಪ್-1ರ ಶುಲ್ಕವು 96,574 ಮತ್ತು ಟೈಪ್-2ರ ಶುಲ್ಕವು 1,04,265 ನಿಗದಿಯಾಗಿತ್ತು. ಕಾಮೆಡ್-ಕೆ ನಲ್ಲಿ 1,73,936 ಮತ್ತು ಟೈಪ್-2ರಲ್ಲಿ 2,24,372 ನಿಗದಿಯಾಗಿತ್ತು. ಈ ವರ್ಷ ಶುಲ್ಕದ ಮೇಲೆ ಶೇ.10 ಶುಲ್ಕ ನಿಗದಿಯಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twenty =
Remember me
