ಬೆಂಗಳೂರು:ರಾಜ್ಯ ಸರ್ಕಾರ ಪ್ರತಿವರ್ಷದಂತೆ ಈ ವರ್ಷವೂ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದೆ. ಆ ಪ್ರಕಾರ 2021ನೇ ಸಾಲಿಗೆ 20 ಸಾರ್ವತ್ರಿಕ ರಜಾದಿನಗಳನ್ನು ಸರ್ಕಾರ ಘೋಷಿಸಿದೆ. ಆದರೆ 2021ರ ಸಾರ್ವತ್ರಿಕ ರಜಾದಿನಗಳ ಪಟ್ಟಿಯಲ್ಲಿ ಸ್ವಾತಂತ್ರ್ಯೋತ್ಸವ, ಕ್ರಿಸ್​ಮಸ್ ಹಾಗೂ ಮಹಾವೀರ ಜಯಂತಿಗೆ ಸರ್ಕಾರ ರಜೆ ಘೋಷಿಸಿಲ್ಲ!
2021ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಜನವರಿ 14ರ ಮಕರ ಸಂಕ್ರಾಂತಿಯಿಂದ ಆರಂಭವಾಗಿ ನವೆಂಬರ್ 22ರ ಕನಕದಾಸ ಜಯಂತಿಯಂದು ಮುಕ್ತಾಯಗೊಳ್ಳುತ್ತದೆ. ಈ ಮಧ್ಯೆ ಗಣರಾಜ್ಯೋತ್ಸವ, ಮಹಾಶಿವರಾತ್ರಿ, ಗುಡ್​ಫ್ರೈಡೇ, ಯುಗಾದಿ, ಅಂಬೇಡ್ಕರ್ ಜಯಂತಿ, ಕಾರ್ಮಿಕರ ದಿನಾಚರಣೆ, ಬಸವ ಜಯಂತಿ, ಅಕ್ಷಯ ತೃತೀಯ, ರಮ್ಜಾನ್​, ಬಕ್ರೀದ್, ಮೊಹರಂ, ವರಸಿದ್ಧಿ ವಿನಾಯಕ ವ್ರತ, ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ, ಆಯುಧಪೂಜೆ, ವಿಜಯದಶಮಿ, ವಾಲ್ಮೀಕಿ ಜಯಂತಿ, ಈದ್​ ಮಿಲಾದ್​, ಕರ್ನಾಟಕ ರಾಜ್ಯೋತ್ಸವ, ನರಕ ಚತುರ್ದಶಿ, ಬಲಿಪಾಡ್ಯಮಿ, ದೀಪಾವಳಿ ರಜೆಗಳು ಈ ಪಟ್ಟಿಯಲ್ಲಿವೆ.
ಆದರೆ ಮಹಾವೀರ ಜಯಂತಿ, ಸ್ವಾತಂತ್ರ್ಯೋತ್ಸವ, ಕ್ರಿಸ್​ಮಸ್ ರಜೆಗಳು ಪಟ್ಟಿಯಲ್ಲಿಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟನೆಯನ್ನೂ ನೀಡಿದೆ. ಮಹಾವೀರ ಜಯಂತಿ( ಏಪ್ರಿಲ್​ 25) ಹಾಗೂ ಸ್ವಾತಂತ್ರ್ಯೋತ್ಸವ (ಆಗಸ್ಟ್​ 15) ಎರಡೂ ಭಾನುವಾರದಂದು ಮತ್ತು ಕ್ರಿಸ್​ಮಸ್​ ರಜಾದಿನವಾದ ನಾಲ್ಕನೇ ಶನಿವಾರದಂದು ಇರುವುದರಿಂದ ಅವುಗಳನ್ನು ಸಾರ್ವತ್ರಿಕ ರಜಾದಿನಗಳ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರ 2021 ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ:@CMofKarnataka@BSYBJP@DDChandanaNewspic.twitter.com/0DXFhkIHQo— DIPR Karnataka (@KarnatakaVarthe)November 23, 2020
ರಾಜ್ಯ ಸರ್ಕಾರ 2021 ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ:@CMofKarnataka@BSYBJP@DDChandanaNewspic.twitter.com/0DXFhkIHQo
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
