ಬೆಂಗಳೂರು:ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಕುಮಾರಿ ಎಂ. ಅವರಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022ರ ಸೆ. 29ರಂದು ಆದೇಶ ಹೊರಡಿಸಿದ್ದರು. ಇದೀಗ ಸರ್ಕಾರ ಬದಲಾಗಿದ್ದು, ನೂತನ ಕಾಂಗ್ರೆಸ್​ ಸರ್ಕಾರ ನೆಟ್ಟಾರ್ ಪತ್ನಿಗೆ ಕೆಲಸದಿಂದ‌ ಕೊಕ್ ಕೊಟ್ಟಿದೆ.
ಪ್ರವೀಣ್​ ನೆಟ್ಟಾರ್ ಅವರ​ ಪತ್ನಿಯನ್ನು ಸರ್ಕಾರ ಕೆಲಸದಿಂದ ತೆಗೆದುಹಾಕುವ ಮೂಲಕ ಹೊಸ ವಿವಾದವನ್ನು ಕಾಂಗ್ರೆಸ್ ಮೈಮೇಲೆ ಎಳೆದುಕೊಂಡಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಹಾಗೂ ಬಿಜೆಪಿ ನಾಯಕರು ಆಡಳಿತ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗಕ್ಕೆ ಕಾಂಗ್ರೆಸ್​ ಸರ್ಕಾರ ಕೊಕ್​!
ಈ ಬಗ್ಗೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರೆಸಿರುವುದು ಖಂಡನೀಯ. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದೆ.

ಕಾಂಗ್ರೆಸ್ ಪಕ್ಷವೇ ಸಾಕಿ‌ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕು. ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯರವರ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ ಎಂದು ಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಕಿಡಿಕಾರಿದೆ.
ಅಧಿಕಾರಕ್ಕೇರಿದ ಕೆಲ ದಿನಗಳಲ್ಲಿಯೇ ಕಾಂಗ್ರೆಸ್ ಸರ್ಕಾರ ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ಉದ್ಯೋಗದಿಂದ ವಜಾಮಾಡಿರುವುದು ಅತ್ಯಂತ ಖಂಡನಾರ್ಹ. ತಕ್ಷಣ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸುತ್ತೇನೆ. ಕರುಣೆ, ಸಹಾನುಭೂತಿ, ಮಾನವೀಯತೆ ಮರೆತಿರುವ ನಿಮ್ಮನ್ನು ನಾಡಿನ ಜನ ಕ್ಷಮಿಸುವುದಿಲ್ಲ ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + nineteen =
Remember me
