ಕಲಬುರಗಿ:ರಾಯಚೂರು ಗೋಲಪಲ್ಲಿಯಲ್ಲಿ 1200 ಮೆ.ವ್ಯಾ. ಸಾಮರ್ಥ್ಯದ 10 ಸಾವಿರ ಕೋಟಿ ರೂ. ವೆಚ್ಚದ ಜಲವಿದ್ಯುತ್ ಯೋಜನೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಏತ ನೀರಾವರಿ, ಈ ಭಾಗದ ಮಕ್ಕಳಿಗೆ ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ವಸತಿ ವ್ಯವಸ್ಥೆ, ಕೊಪ್ಪಳದಲ್ಲಿ ಗೊಂಬೆ ತಯಾರಿಕೆ ವಿಶೇಷ ಆರ್ಥಿಕ ವಲಯ, ಯಾದಗಿರಿ ಜಿಲ್ಲೆ ಕಡೇಚೂರದಲ್ಲಿ ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆ ಸೇರಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೊಷಿಸಿದರು.
ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, 1300 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘವು ನಿಗದಿತ ಗುರಿ ತಲುಪಲಿವೆ ಎಂಬ ವಿಶ್ವಾಸವಿದೆ. ಈ ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ಸರ್ಕಾರದ ಪ್ರಮುಖ ಗುರಿಗಳಲ್ಲಿ ಒಂದು ಎಂದರು.
-ಠಿ;300 ಕೋಟಿ ಅನುದಾನ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘಕ್ಕೆ 300 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದ್ದು, ಈಗಾಗಲೇ 100 ಕೋಟಿ ರೂ. ಕೊಡಲಾಗಿದೆ ಎಂದರು. ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆ ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜತೆ ಮಾತುಕತೆ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ 4 ತಿಂಗಳಲ್ಲಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಆರಂಭವಾಗಲಿದೆ ಎಂದರು.
ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು. ಡಿಸಿಎಂ ಗೋವಿಂದ ಕಾರಜೋಳ, ಸಂಸದ ಡಾ.ಉಮೇಶ ಜಾಧವ್, ಶಾಸಕರಾದ ಬಿ.ಜಿ.ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ, ಡಾ.ಅಜಯಸಿಂಗ್, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ್, ಮಾಜಿ ಶಾಸಕರಾದ ಅಮರನಾಥ ಪಾಟೀಲ್, ಶಶೀಲ್ ನಮೋಶಿ, ಮುಖಂಡರಾದ ಚಂದು ಪಾಟೀಲ್, ಲಕ್ಷ್ಮಣ ದಸ್ತಿ ಇದ್ದರು.
ವರಿಷ್ಠರು ಒಪ್ಪಿದರೆ ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆ
ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಜತೆಗೆ ರಾಜ್ಯವನ್ನು ಬೆಂಬಿಡದೆ ಕಾಡುತ್ತಿರುವ ಅತಿವೃಷ್ಟಿ ಹಾನಿಗೆ ಪರಿಹಾರ ಸೇರಿ ಕೆಲ ವಿಷಯಗಳ ಪ್ರಸ್ತಾವನೆ ಹೊತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಕಲಬುರಗಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಈ ಸಂದರ್ಭ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅಧಿವೇಶನಕ್ಕೂ ಮುನ್ನ ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಅಪೇಕ್ಷೆ ನನ್ನದು. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇತರರನ್ನು ಭೇಟಿ ಮಾಡಿ ಸಲಹೆ ಮತ್ತು ಅಭಿಪ್ರಾಯ ಪಡೆಯುವೆ. ಅವರ ಒಪ್ಪಿಗೆ ಮೇಲೆ ಎಲ್ಲವೂ ಅವಲಂಬಿಸಿದೆ. ಸರ್ಕಾರ ರಚನೆಗೆ ಕಾರಣರಾದವರಿಗೆ ಅವಕಾಶ ಕಲ್ಪಿಸುವ ಸುಳಿವು ನೀಡಿದ ಅವರು, ಕಲಬುರಗಿ ಜಿಲ್ಲೆಗೂ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬೇಡಿಕೆ ಬಗ್ಗೆ ಪರಿಶೀಲಿಸುವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
