ಹಾಸನ:ಚನ್ನರಾಯಪಟ್ಟಣ ತಾಲೂಕು ಬಿ. ಹೊನ್ನೇನಹಳ್ಳಿ ಗ್ರಾಮದ ಸರ್ಕಾರಿ ಜಮೀನನ್ನು ಬಲಾಢ್ಯರು ಕಬಳಿಸಲು ಯತ್ನಿಸುತ್ತಿದ್ದು ಜಿಲ್ಲಾಡಳಿತ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.ಗ್ರಾಮದಲ್ಲಿ ಖಾಲಿ ಇರುವ 3.47 ಎಕರೆ ಪ್ರದೇಶವನ್ನು ತಾಲೂಕು ಆಡಳಿತ ಒಳ್ಳೆಯ ಉದ್ದೇಶದಿಂದ ಮೀಸಲಿಟ್ಟಿದೆ. ಅಂಗನವಾಡಿ, ಸಮುದಾಯ ಭವನ ಹೀಗೆ ಇತರ ಕಟ್ಟಡಗಳ ಮೂಲಕ ಊರಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿದೆ. ಆದರೆ ಇತ್ತೀಚೆಗೆ ಆ ಜಾಗವನ್ನು ರಾಜಕೀಯ ಶಕ್ತಿ ಬಳಸಿಕೊಂಡು ವಶಕ್ಕೆ ಪಡೆಯಲು ಕೆಲವರು ಹವಣಿಸುತ್ತಿದ್ದಾರೆ. ಈ ಸಂಬಂದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fifteen =
Remember me
