ಬೆಂಗಳೂರು:ಬಡವರಿಗೆ ನ್ಯಾಯ ಸಿಗದಿದ್ದರೆ ಸರ್ಕಾರಿ ವಕೀಲರನ್ನು ನೇಮಿಸಿಕೊಂಡಿದ್ದು ಸಾರ್ಥಕ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ-2023ರ ಸಭೆಯಲ್ಲಿ ಮಾತನಾಡಿದರು.
ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು ಎಂದರೆ ಜನರ ಕೇಸುಗಳು. ಜನರಿಗೆ ನ್ಯಾಯ ಸಿಗುವ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಬಡವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗುವ ಶಕ್ತಿ ಇರುವುದಿಲ್ಲ. ಬಡವರಿಗೆ ನ್ಯಾಯ ಸಿಗದೇ ಇದ್ದರೆ ವಕೀಲರನ್ನು ನೇಮಕ ಮಾಡಿ ಪ್ರಯೋಜನವಾಗುವುದಿಲ್ಲ ಎಂದರು.
ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸಂವಿಧಾನದ ಈ ಆಶಯ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಸಲಹೆ ನೀಡಿದರು.ಪ್ಲೀಡಿಂಗ್ಸ್ ಸರಿಯಾಗಿ ಪರಿಣಾಮಕಾರಿಯಾಗಿ ಬರೆಯುವುದು ಬಹಳ ಮುಖ್ಯ. ಈ ಹಂತದಲ್ಲೇ ಅಸಡ್ಡೆ, ಉಡಾಫೆತನ ಪ್ರದರ್ಶಿಸಿದರೆ ನ್ಯಾಯ ಪ್ರಕ್ರಿಯೆಯ ಮುಂದಿನ ಎಲ್ಲ ಹಂತಗಳಲ್ಲಿ ವೈಫಲ್ಯ ಆಗುತ್ತದೆ. ಆದ್ದರಿಂದ ಬಹಳ ಜವಾಬ್ದಾರಿಯುತವಾಗಿ ಸರ್ಕಾರಿ ವಕೀಲರು ವರ್ತಿಸಬೇಕು ಎಂದು ಸೂಚಿಸಿದರು.ಸರ್ಕಾರಿ ವಕೀಲರು ಮತ್ತು ಅಧಿಕಾರಿಗಳ ವೈಫಲ್ಯಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ. ನಮಗೆ ಹಣ ಕೊಡುವುದು ಜನರು. ಜನರ ಹಣದಲ್ಲಿ ನಮಗೆ ಸವಲತ್ತುಗಳು ಸಿಗುತ್ತಿವೆ. ಈ ಬಗ್ಗೆ ನಮಗೆ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆ ಹಾಗೂ ಧನ್ಯತೆ ಇರಬೇಕು ಎಂದು ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
